ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಯಕತ್ವ ಬದಲಾವಣೆಗೆ ರಾಷ್ಟ್ರೀಯ ನಾಯಕರು ಚಿಂತಿಸಿಲ್ಲ: ನಿರಾಣಿ

Last Updated 10 ಜೂನ್ 2021, 14:24 IST
ಅಕ್ಷರ ಗಾತ್ರ

ಬೆಳಗಾವಿ: ‘ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ರಾಷ್ಟ್ರೀಯ ನಾಯಕರು ಚಿಂತನೆ ನಡೆಸಿಲ್ಲ’ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ತಿಳಿಸಿದರು.

ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕೂಡ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ನಾಯಕರಾದ ಪ್ರಲ್ಹಾದ ಜೋಶಿ, ಸಿ.ಟಿ. ರವಿ ಕೂಡ ಇದನ್ನೇ ಹೇಳಿದ್ದಾರೆ. ಆದರೆ, ಬದಲಾವಣೆ ಬಗ್ಗೆ ಮಾಧ್ಯಮದಲ್ಲಿ ಮಾತ್ರವೇ ಸುದ್ದಿ ಬರುತ್ತಿದೆ’ ಎಂದರು.

‘ನಿರಾಣಿ ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿದ್ದಾರೆಯೇ’ ಎಂಬ ಪ್ರಶ್ನೆಗೆ, ‘ನಮ್ಮ ರಾಷ್ಟ್ರೀಯ ನಾಯಕರು ಅನುಭವಿಗಳಿದ್ದಾರೆ. ಅವರು ನಿರ್ಧರಿಸುತ್ತಾರೆ. ನನಗೆ ಆ ಹುದ್ದೆ ನೀಡಿದಾಗ ಪ್ರತಿಕ್ರಿಯಿಸುತ್ತೇನೆ. ಬಿ.ಎಸ್. ಯಡಿಯೂರಪ್ಪ ಅವರೇಅಧಿಕಾರದ ಅವಧಿ ಪೂರೈಸಲಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯೂ ಅವರ ನೇತೃತ್ವದಲ್ಲೇ ನಡೆಯಲಿದೆ. ಅವರ ಬಗ್ಗೆ ಕೇಂದ್ರ ನಾಯಕರಿಗೆ ಬಹಳ ವಿಶ್ವಾಸವಿದೆ’ ಎಂದು ಪ್ರತಿಕ್ರಿಯಿಸಿದರು.

‘ಜೂನ್‌ 15ಕ್ಕೆ ಮುಖ್ಯಮಂತ್ರಿ ಬದಲಾಗಲಿದ್ದಾರೆ’ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ, ‘ಆ ವಿಷಯ ನನಗೆ ಗೊತ್ತಿಲ್ಲ. ಅವರನ್ನೇ ಕೇಳಿ’ ಎಂದರು.

‘ರಾಜ್ಯದಲ್ಲಿ ಹೊಸ ಮರಳು ನೀತಿ ಅನುಷ್ಠಾನ ವಿಚಾರದಲ್ಲಿ ಕ್ರಮ ವಹಿಸಲಾಗಿದೆ. ಕರಡು ಸಿದ್ಧಪಡಿಸಿ ಎಲ್ಲ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಪ್ರತಿಕ್ರಿಯೆ ಕೇಳಲಾಗಿದ್ದು, 15 ದಿನ ಸಮಯ ಅವಕಾಶ ನೀಡಲಾಗಿದೆ. ಹೊಸ ಮರಳು ನೀತಿಯನ್ನು ಇಡೀ ದೇಶವೇ ಮೆಚ್ಚುವಂತೆ ಮಾಡುತ್ತೇನೆ. ಆ ನೀತಿಯಿಂದ ಯಾವುದೇ ಅಕ್ರಮ ಆಗುವುದಿಲ್ಲ. ಯಾರ ಕೈವಾಡವೂ ಇರುವುದಿಲ್ಲ. ಸರ್ಕಾರಕ್ಕೆ ಲಾಭವಾಗುವ ಜೊತೆಗೆ ಜಿಲ್ಲಾಡಳಿತಗಳಿಗೆ ತೊಂದರೆ ತಪ್ಪಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಶಾಸಕರು, ಸಚಿವರು ಹಾಗೂ ಐಎಎಸ್ ಅಧಿಕಾರಿಗಳು ಇನ್ನಷ್ಟು ಕ್ರಿಯಾಶೀಲರಾಗಿ ಕೆಲಸ ನಿರ್ವಹಿಸುವಂತೆ ಮಾಡಲು ತರಬೇತಿ ಶಿಬಿರ ನಡೆಸಲು ಯೋಚಿಸುತ್ತಿದ್ದೇವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT