ಚನ್ನಮ್ಮನ ಕಿತ್ತೂರು: ‘ಗೋಹತ್ಯೆ ಮತ್ತು ಗೋವುಗಳನ್ನು ಹಿಂಸಾತ್ಮಕವಾಗಿ ಕೂಡಿ ಹಾಕಿರುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದನ್ನು ಬಿಟ್ಟು, ಅವುಗಳನ್ನು ಪತ್ತೆ ಹಚ್ಚಿ ರಕ್ಷಣೆ ಮಾಡಿದವರ ಮೇಲೆ ಪೊಲೀಸರು ಪ್ರಕರಣಗಳನ್ನು ದಾಖಲು ಮಾಡಿದ್ದಾರೆ. ಅವುಗಳನ್ನು ಕೂಡಲೇ ಹಿಂಪಡೆಯಬೇಕು’ ಎಂದು ಬಜರಂಗ ದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಪಟ್ಟು ಹಿಡಿದರು.

ಇಲ್ಲಿನ ಕಸಾಯಿ ಗಲ್ಲಿಯಲ್ಲಿ ಮೇವು, ನೀರು ನೀಡದೆ 58 ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕೂಡಿ ಹಾಕಲಾಗಿದೆ. ಕೆಲವು ಹಸುಗಳನ್ನು ಹತ್ಯೆ ಮಾಡಲಾಗಿದೆ. ಅವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಜರಂಗ ದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಕೋಟೆ ಮಹಾದ್ವಾರದ ಎದುರು ಮಂಗಳವಾರ ಆಯೋಜಿಸಿದ್ದ ಪ್ರತಿಭಟನೆ ಸಭೆಯಲ್ಲಿ ಈ ಘಟನೆ ನಡೆಯಿತು.

‘ಗೋಹತ್ಯೆ ತಡೆಯಲು ಹೋದವರ ಮೇಲೆ ಮುಂಜಾಗ್ರತೆ ಕ್ರಮದ ಹೆಸರಿನಲ್ಲಿ ಒಂದು ವರ್ಷದ ಅವಧಿಯವರೆಗೆ ಶಾಂತತೆಯಿಂದ ಇರುವುದಾಗಿ ವಿವರಣೆ ನೀಡಬೇಕು ಎಂದು ಬಜರಂಗ ದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರಿಗೆ ನೋಟಿಸು ಕೊಟ್ಟಿರುವ ಕೆಲಸ ನಿಮ್ಮಂದಲೇ (ಪೊಲೀಸರಿಂದ) ಆಗಿದೆ. ಅವರೇನು ಶಾಂತತೆ ಭಂಗ ಮಾಡಲು ಹೋಗಿದ್ದರು’ ಎಂದು ಮುಖಂಡ ಪುನೀತ್ ಕೆರೆಹಳ್ಳಿ ಪೊಲೀಸರನ್ನು ಪ್ರಶ್ನಿಸಿದರು.

ಅದಕ್ಕೆ ಡಿವೈಎಸ್ಪಿ ವೀರಯ್ಯ ಹಿರೇಮಠ ಸಮಜಾಯಿಷಿ ನೀಡಲು ಹೋದರು. ಇದಕ್ಕೆ ಒಪ್ಪದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ, ವಿಶ್ವ ಹಿಂದೂ ಪರಿಷತ್ ಮುಖಂಡ ಕೃಷ್ಣಭಟ್ ಮತ್ತಿತರರು, ‘ಪ್ರಕರಣ ವಾಪಸು ಪಡೆಯದಿದ್ದರೆ ವೇದಿಕೆ ಬಿಟ್ಟು ಕದಲುವುದಿಲ್ಲ’ ಎಂದು ಪಟ್ಟು ಹಿಡಿದರು. ವೇದಿಕೆಯಲ್ಲಿದ್ದ ತಹಶೀಲ್ದಾರ್ ಕಲಗೌಡ ಪಾಟೀಲ ಅವರು, ‘ನಿಮ್ಮ ಪರವಾಗಿ ವಕೀಲರು ಹಾಜರಾದರೆ ಪ್ರಕರಣ ಮುಕ್ತಾಯಗೊಳಿಸಲಾಗುವುದು’ ಎಂದು ಭರವಸೆ ನೀಡಿದರು. ಇದಕ್ಕೆ ಒಪ್ಪಿಗೆ ರೂಪದಲ್ಲಿ ಕಾರ್ಯಕರ್ತರು ಘೋಷಣೆ ಕೂಗಿದರು. ನಂತರ ಮುಖಂಡರು ಪ್ರತಿಭಟನೆ ಹಿಂಪಡೆದರು.

ಇದಕ್ಕೂ ಮೊದಲು ವಿಶ್ವ ಹಿಂದೂ ಪರಿಷತ್ ಮುಖಂಡ ಕೃಷ್ಣಭಟ್ ಮಾತನಾಡಿ, ‘ಯಾವುದೋ ಕಾಲದಲ್ಲಿ ಕುರ್ಬಾನಿ ಹೆಸರಿನಲ್ಲಿ ನಡೆಯುತ್ತಿದ್ದ ಗೋಹತ್ಯೆ ಮಾಡುವುದು ಬಿಟ್ಟರೆ ನಾವೆಲ್ಲ ಒಂದಾಗಿ ಬಾಳಲು ಸಾಧ್ಯವಿದೆ’ ಎಂದರು.

ಮುಖಂಡ ಪುನೀತ್ ಕೆರೆಹಳ್ಳಿ ಮಾತನಾಡಿ, ‘ಯಾವನೋ ಒಬ್ಬ ಮೌಲ್ವಿ ಹಸುವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎನ್ನುತ್ತಿದ್ದಾನೆ. ಇದು ದಿಕ್ಕು ತಪ್ಪಿಸುವ ಕೆಲಸವಾಗಿದೆ’ ಎಂದು ವಾಗ್ದಾಳಿ ನಡೆಸಿದರು.

ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ನಿಚ್ಚಣಕಿಯ ಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಸ್ವಾಮೀಜಿ, ದೇಗುಲಹಳ್ಳಿ, ಅಂಬಡಗಟ್ಟಿಯ ಮಠದ ವೀರೇಶ್ವರ ಸ್ವಾಮೀಜಿ, ಮುಖಂಡರಾದ ಪ್ರಮೋದಕುಮಾರ ಒಕ್ಕುಂದಮಠ, ಬಸವರಾಜ ಸುಗೂರ, ಪುಂಡಲೀಕ ದಳವಾಯಿ, ಮಲ್ಲಸರ್ಜ ರೆಡ್ಡಿ, ಮಡಿವಾಳಪ್ಪ ಮುರಗೋಡ, ಲಕ್ಷ್ಮಿ ಇನಾಮದಾರ, ಬಸವರಾಜ ಪರವಣ್ಣವರ, ಶ್ರೀಕರ ಕುಲಕರ್ಣಿ, ಕಿತ್ತೂರು ಭಾಗವಹಿಸಿದ್ದರು. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-21-715997515

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.