ಚನ್ನಮ್ಮನ ಕಿತ್ತೂರು: ಗ್ಯಾರಂಟಿ ಯೋಜನೆಗಳ ಸವಲತ್ತುಗಳು ನೈಜ ಫಲಾನುಭವಿಗೆ ಸಮರ್ಪಕವಾಗಿ ತಲುಪಿಸಲು ಅಧಿಕಾರಿಗಳು ಮತ್ತಷ್ಟು ದಕ್ಷತೆ ಹಾಗೂ ಸಮನ್ವಯದಿಂದ ಕೆಲಸ ನಿರ್ವಹಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಿಂಗಪ್ಪ ಮಸಳಿ ಸಲಹೆ ನೀಡಿದರು.

ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ, ಜವಾಬ್ದಾರಿ ಮತ್ತು ಸಮನ್ವಯತೆ ಪ್ರಮುಖ ಪಾತ್ರ ವಹಿಸುತ್ತವೆ. ಈ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಉತ್ತಮ ಫಲಿತಾಂಶ ಸಾಧಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.

ಜಿಲ್ಲಾ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷ ರುದ್ರಯ್ಯ ಹಿರೇಮಠ ಮಾತನಾಡಿ, ಸರ್ಕಾರದ ಈ ಯೋಜನೆಗಳು ಸಾಮಾನ್ಯ ಜನರ ಜೀವನಮಟ್ಟವನ್ನು ಉತ್ತಮಗೊಳಿಸುವಲ್ಲಿ ಹೆಚ್ಚು ಪರಿಣಾಮಕಾರಿ ಆಗಿವೆ ಎಂದರು.

ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಗಂಗಪ್ಪ ಹುರಕಡ್ಲಿ, ಸಹಾಯಕ ನಿರ್ದೇಶಕ ಮಹಮ್ಮದ್ ಗೌಸ್ ರಿಸಲ್ದಾರ್, ವಿಜಯ ಪಾಟೀಲ, ಕಚೇರಿ ವ್ಯವಸ್ಥಾಪಕಿ ರಾಜೇಶ್ವರಿ ಪಟ್ಟಣಶೆಟ್ಟಿ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಿತಿ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-21-1338530998

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.