ಚನ್ನಮ್ಮನ ಕಿತ್ತೂರು: ‘ಬೇಸಿಗೆ ಕಾಲ ಆಗಿರುವುದರಿಂದ ವಿದ್ಯುತ್ ಪರಿವರ್ತಕ (ಟಿಸಿ)ಗಳು ಸುಡುತ್ತವೆ. ಈ ಸಮಸ್ಯೆ ಹೊತ್ತು ಹೆಸ್ಕಾಂ ಕಚೇರಿಗೆ ರೈತರು ಬಂದಾಗ ಅವರ ಜತೆ ಅಧಿಕಾರಿಗಳು ಅನುಚಿತ ವರ್ತನೆ ತೋರಬಾರದು. ಸೌಜನ್ಯದಿಂದ ಮಾತನಾಡಿಸಿ ಅವರ ಸಮಸ್ಯೆ ಅರಿತು ಪರಿಹರಿಸಿ ಕಳುಹಿಸಬೇಕು’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ತಾಕೀತು ಮಾಡಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಬುಧವಾರ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಪಂಪ್ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಈಗಾಗಲೇ ರೈತರು ಹಣ ತುಂಬಿದ್ದರೆ ಅವರಿಗೆ ಬೇಗ ಸಂಪರ್ಕ ಕಲ್ಪಿಸಿಕೊಡಬೇಕು. ಟಿಸಿ ಸುಟ್ಟರೆ ಅವಧಿಯೊಳಗೆ ಬದಲಾವಣೆ ಮಾಡಿಕೊಡಬೇಕು. ಬೇಗ ನೀಡಿದರೆ ಅವರ ಬೆಳೆಗಳಿಗೆ ಹಾನಿ ತಟ್ಟುವುದಿಲ್ಲ’ ಎಂದು ತಿಳಿಸಿದರು.

ಬೇಸಿಗೆ ಬಂದಿದ್ದು, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗೆ ತೊಂದರೆ ಆಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಕೆಡಿಪಿ ಸಭೆಗೆ ಗೈರಾದ ನೀರಾವರಿ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಸಹಾಯಕ ನಿಬಂಧಕ, ಉಪನೋಂದಣಿ ಅಧಿಕಾರಿ, ಕೈಗಾರಿಕೆ ಇಲಾಖೆ ಅಧಿಕಾರಿಗೆ ಕಾರಣ ಕೇಳಿ ನೋಟಿಸ್ ನೀಡಬೇಕು. ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿದ್ದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಿಂಗಪ್ಪ ಮಸಳಿ ಅವರಿಗೆ ಆದೇಶಿಸಿದರು.

ಗ್ಯಾರಂಟಿ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಗಂಗಪ್ಪ ಹುರಕಡ್ಲಿ, ಲೋಕೋಪಯೋಗಿ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಸಾರಿಗೆ, ಪಶುಸಂಗೋಪನೆ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಇಲಾಖೆ ಸೇರಿ ವಿವಿಧ ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-21-1113346837

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.