ಚನ್ನಮ್ಮನ ಕಿತ್ತೂರು: ಇಲ್ಲಿಯ ಕಲ್ಮಠದ ಚಂದರಗಿ ಸಭಾಭವನದಲ್ಲಿ ಮೇ 5ರಂದು ಬೆಳಿಗ್ಗೆ 10.30ಕ್ಕೆ 112ನೇ ಕಸಾಪ ಸಂಸ್ಥಾಪನಾ ದಿನಾಚರಣೆ ನಡೆಯಲಿದೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಬಿ. ದಳವಾಯಿ ತಿಳಿಸಿದ್ದಾರೆ.

ಭಾನುವಾರ ಪತ್ರಕರ್ತರ ಜತೆ ಮಾತನಾಡಿದ ಅವರು, ‘ರಾಜಗುರು ಸಂಸ್ಥಾನ ಕಲ್ಮಠದ ಪೀಠಾಧಿಕಾರಿ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕ್ಷೇತ್ರ ಶಿಕ್ಷಣಾಧಿಕಾರಿ ಚನಬಸಪ್ಪ ತುಬಾಕಿ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಕ್ಷೇತ್ರ ಸಮನ್ವಯ ಅಧಿಕಾರಿ ಗಾಯತ್ರಿ ಅಜ್ಜನ್ನವರ, ಮಂಜುಳಾ ಕಡಕೋಳ ಅತಿಥಿಗಳಾಗಿ ಭಾಗವಹಿಸುವರು’ ಎಂದರು.

‘ಕನ್ನಡ ಭಾಷೆಯ ಮಾಧ್ಯಮ ಉಳಿವು-ಬೆಳವಣಿಗೆಯಲ್ಲಿ ಪರಿಷತ್ತಿನ ಪಾತ್ರ’ ವಿಷಯವಾಗಿ ಉಪನ್ಯಾಸ ನಡೆಯಲಿದೆ. ರಾಜಗುರು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ತಾಲ್ಲೂಕಿನ ಪ್ರತಿಭಾವಂತ ಮಕ್ಕಳಿಗೆ ಸತ್ಕಾರ ಕಾರ್ಯಕ್ರಮವಿದೆ ಎಂದು ಅವರು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-21-1500771592

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.