ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಮ್ಮನ ಕಿತ್ತೂರು: ಬಿಜೆಪಿ ಸದಸ್ಯ ಅಪಹರಣ; ಮೂವರ ಮೇಲೆ ಪ್ರಕರಣ

Published 30 ಆಗಸ್ಟ್ 2024, 4:52 IST
Last Updated 30 ಆಗಸ್ಟ್ 2024, 4:52 IST
ಅಕ್ಷರ ಗಾತ್ರ

ಚನ್ನಮ್ಮನ ಕಿತ್ತೂರು: ಇಲ್ಲಿಯ ಪಟ್ಟಣ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ಬಿಜೆಪಿ ಸದಸ್ಯ ನಾಗರಾಜ ಬಸವರಾಜ ಅಸುಂಡಿ (36) ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಮ್ಮನ ಕಿತ್ತೂರು ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ತಾಲ್ಲೂಕಿನ ಮೇಟ್ಯಾಲ ಗ್ರಾಮದ ಅಶೋಕ ಚನ್ನಬಸಪ್ಪ ಮಾಳಗಿ, ಚನ್ನಾಪುರದ ಬಸವರಾಜ ಶೇಖಪ್ಪ ಸಂಗೊಳ್ಳಿ ಮತ್ತು ಕಿತ್ತೂರಿನ ಸೋಮವಾರ ಪೇಟೆಯ ಸುರೇಶ ಈರಪ್ಪ ಕಡೇಮನಿ ಆರೋಪಿಗಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಾಗರಾಜ ತಂದೆ ಬಸವರಾಜ ಈ ಬಗ್ಗೆ ದೂರು ನೀಡಿದ್ದಾರೆ.

ಪ್ರತಿಭಟನೆ: ಪಟ್ಟಣ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ನಾಗರಾಜ ಅವರನ್ನು ಅಪಹರಣ ಮಾಡಲಾಗಿದೆ ಎಂದು ತಿಳಿಸಿರುವ ಬಿಜೆಪಿ ಮುಖಂಡರು, ಶುಕ್ರವಾರ ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT