ಗೋಕಾಕ: ‘ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ ಜೀವದ ಹಂಗು ತೊರೆದು ಕೆಲಸ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಕಾರ್ಯ ಪ್ರಶಂಸನೀಯವಾದುದು’ ಎಂದು ಮುಖಂಡ ರಾಜೇಂದ್ರ ಸಣ್ಣಕ್ಕಿ ಹೇಳಿದರು.
ಇಲ್ಲಿನ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಗುರುವಾರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವು (ಬೆಮುಲ್) ಏರ್ಪಡಿಸಿದ್ದ ಮೂಡಲಗಿ ತಾಲ್ಲೂಕಿನ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಚೆಕ್ (ತಲಾ ₹ 3ಸಾವಿರ) ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಕೆಎಂಎಫ್ ಅಧ್ಯಕ್ಷರೂ ಆದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಮತಕ್ಷೇತ್ರದ ಪ್ರತಿ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್‌ಗಳ ವಿತರಿಸುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ತೋರಿದ ಆಸಕ್ತಿ ಗಣನೀಯವಾದುದು. ಮನೆ ಮನೆಗಳಿಗೆ ತೆರಳಿ ಸಮೀಕ್ಷೆ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅವರಿಗೆ ಸರ್ಕಾರ ನೀಡುತ್ತಿರುವ ವೇತನ ಕಡಿಮೆ’ ಎಂದರು.
ಜಿಲ್ಲಾ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಡಾ.ಎಂ.ವಿ. ಲಕ್ಕಣ್ಣವರ್ ಮಾತನಾಡಿದರು. ಒಕ್ಕೂಟದ ನಿರ್ದೇಶಕರಾದ ಮಲ್ಲಪ್ಪ ಪಾಟೀಲ, ರಾಮಣ್ಣ ಬಂಡಿ, ಶಾಕರ ಆಪ್ತಸಹಾಯಕ ನಾಗಪ್ಪ ಶೇಖರಗೋಳ, ನಿಂಗಪ್ಪ ಕುರಬೇಟ, ದಾಸಪ್ಪ ನಾಯಿಕ ಮತ್ತು ಲಕ್ಕಪ್ಪ ಲೋಕುರಿ, ಸಹಕಾರ ಇಲಾಖೆಯ ಬಿ.ಕೆ. ಗೋಖಲೆ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.