ಸೋಮವಾರ, ಆಗಸ್ಟ್ 15, 2022
21 °C

ಪರಿಹಾರದ ಚೆಕ್ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಬೆಂಕಿ ಆಕಸ್ಮಿಕದಿಂದ ಮನೆ ಕಳೆದುಕೊಂಡ ತಾಲ್ಲೂಕಿನ ಹಲಗಾ ಗ್ರಾಮದ ಐದು ಕುಟುಂಬಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಮಂಜೂರು ಮಾಡಿಸಿದ್ದಾರೆ.

ಐದು ತಿಂಗಳ ಹಿಂದೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಐದು ಮನೆಗಳು ಆಹುತಿಯಾಗಿದ್ದವು. ಪ್ರತಿ ಕುಟುಂಬಕ್ಕೆ ತಲಾ ₹ 5 ಲಕ್ಷ ಮಂಜೂರಾಗಿದೆ. ಶಾಸಕರ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಯುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಹಾಗೂ ಪಕ್ಷದ ಕಾರ್ಯಕರ್ತರು ಚೆಕ್‌ಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಗ್ರಾಮದ ಹಿರಿಯರು, ಸುಕುಮಾರ ಪಾಟೀಲ, ಮಹಾವೀರ ಬೆಲ್ಲದ, ಮಹಾವೀರ ಪಾಟೀಲ, ಶಾಂತು ಬೆಲ್ಲದ, ಕಿರಣ ಹನಮಂತಾಚೆ, ಸುಕುಮಾರ ಹುಡೆದ, ಸಿದ್ದು ತುರಂಗಿ, ಸಾಗರ ಕಾಮನಾಚೆ, ಜ್ಯೋತಿಬಾ ಚೌಗುಲೆ, ಪಿರಾಜಿ ಜಾಧವ್, ಬಾಳು ಕಾಮತಿ, ಪ್ರಶಾಂತ ಶಟವಾಜಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು