ಶನಿವಾರ, ಮೇ 21, 2022
25 °C
ಜಿಲ್ಲಾಡಳಿತದಿಂದ ಛತ್ರಪತಿ ಶಿವಾಜಿ ಜಯಂತಿ ಆಚರಣೆ

ಶಿವಾಜಿಯ ಶೌರ್ಯ ಯುವಕರಿಗೆ ಆದರ್ಶವಾಗಲಿ: ಸಂಜಯ ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಶಿವಾಜಿ ಉದ್ಯಾನದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಶುಕ್ರವಾರ ಸರಳವಾಗಿ ಆಚರಿಸಲಾಯಿತು.

ಶಾಸಕರಾದ ಅಭಯ ಪಾಟೀಲ ಮತ್ತು ಅನಿಲ್ ಬೆನಕೆ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಆಶಾ ಐಹೊಳೆ, ನಗರಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್ ಅವರು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಎಸಿಪಿ ಸದಾಶಿವ ಕಟ್ಟಿಮನಿ, ನಗರಪಾಲಿಕೆ ಉಪ ಆಯುಕ್ತೆ ಲಕ್ಷ್ಮಿ ನಿಪ್ಪಾಣಿಕರ ಉಪಸ್ಥಿತರಿದ್ದರು.

ಬಿಜೆಪಿಯಿಂದ ಆಚರಣೆ:

‘ಯುವಕರಿಗೆ ಧೈರ್ಯ, ಸಾಹಸ ಹಾಗೂ ಅಭಿಮಾನದ ಸಂಕೇತವಾಗಿರುವ ಶಿವಾಜಿ ಮಹಾರಾಜರು ಆದರ್ಶಪ್ರಾಯರಾಗಿದ್ದಾರೆ’ ಎಂದು ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಹೇಳಿದರು.

ಶಿವಾಜಿ ಅವರ 391ನೇ ಜಯಂತಿ ಅಂಗವಾಗಿ ಶಿವಾಜಿ ಉದ್ಯಾನದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

‘ಇಂದಿನ ಯುವಪೀಳಿಗೆ ಛತ್ರಪತಿಯಂತೆಯೇ ಸಾಹಸ, ಧೈರ್ಯ ಮತ್ತು ಹೋರಾಟದ ಮನೋಭಾವ ಬೆಳೆಸಿಕೊಳ್ಳಬೇಕು. ದೇಶ ಕಂಡ ಅಪ್ರತಿಮ  ಹೋರಾಟಗಾರ ಅವರು. ಅನೇಕ ವೈರಿಗಳನ್ನು ಹಿಮ್ಮೆಟ್ಟಿಸಿ ಸಾಮ್ರಾಜ್ಯ ಕಟ್ಟಿ ಹಿಂದುತ್ವ ಉಳಿಸಿದ ಹಿಂದೂಗಳ ಹೃದಯ ಸಾಮ್ರಾಟವಾಗಿದ್ದಾರೆ. ಯುದ್ಧ ಕಲೆಗಳನ್ನು ಕರಗತ ಮಾಡಿಕೊಂಡು ಏಕಾಂಗಿಯಾಗಿ ಹೋರಾಟ ಮಾಡಿದವರು. ಸೈನ್ಯ ಕಟ್ಟಿಕೊಂಡು ದೊಡ್ಡ ದೊಡ್ಡ ಸೈನ್ಯ ಹೊಂದಿದ್ದ ದೇಶ ವಿರೋಧಿಗಳಿಗೆ  ಸೋಲಿನ ರುಚಿ ತೋರಿಸಿದವರು’ ಎಂದು ಸ್ಮರಿಸಿದರು.

‘ಜೀಜಾಬಾಯಿ ಬಾಲ್ಯದಲ್ಲಿಯೇ ಶಿವಾಜಿಗೆ ಧಾರ್ಮಿಕ ಸಂಸ್ಕಾರದೊಂದಿಗೆ ಯುದ್ಧ ಕಲೆಗಳನ್ನು ಕರಗತ ಮಾಡಿಸಿದ್ದರು. ಇದರಿಂದಾಗಿ ಅವರು ಛತ್ರಪತಿಯಾಗಿ ಬಾನೆತ್ತರಕ್ಕೆ ಬೆಳೆದು ಅಜರಾಮರಾಗಿದ್ದಾರೆ. ಹಲವು ಕೋಟೆಗಳನ್ನು ನೀಡಿದ್ದಾರೆ. ಅದರು ಹಾಕಿಕೊಟ್ಟ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕು’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ ಮೋಹಿತೆ, ಜಾಲತಾಣದ ಸಂಚಾಲಕ ನಿತಿನ ಚೌಗಲೆ, ಮುಖಂಡರಾದ ರಾಜು ದೇಸಾಯಿ, ಶಂಕರ ಜತ್ರಾಟಿ, ಡಾ.ಯಲ್ಲಪ್ಪ ಪಾಟೀಲ, ಡಾ.ಸೋನಾಲಿ ಸರ್ನೋಬತ್, ರಂಜನಾ ಕೋಲಕಾರ, ಉಮಾಶಂಕರ ದೇಸಾಯಿ, ಪ್ರವೀಣ ಪಾಟೀಲ, ವೀರಭದ್ರಯ್ಯ ಪೂಜಾರ, ಭಾಸ್ಕರ ಪಾಟೀಲ, ಚೇತನಾ ಪಾಟೀಲ, ನಿರಂಜನ ಜಾಧವ ಪಾಲ್ಗೊಂಡಿದ್ದರು.

ಶಿಂದೊಳ್ಳಿಯಲ್ಲಿ ಆಚರಣೆ

ತಾಲ್ಲೂಕಿನ ಶಿಂದೊಳ್ಳಿ ಗ್ರಾಮದ ಶಿವಾಜಿ ಚೌಕದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜಯಂತಿ ಆಚರಿಸಲಾಯಿತು. ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಪ್ರಧಾನ ಕಾರ್ಯದರ್ಶಿ ಮಹೇಶ ಮೊಹಿತೆ, ಕಾರ್ಯದರ್ಶಿ ವೀರಭದ್ರಯ್ಯ ಪೂಜಾರ, ಮಂಡಲ ಅಧ್ಯಕ್ಷ ಧನಂಜಯ ಜಾಧವ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ  ಮಿಲನ ಮಾತಾರಿ, ಮುಖಂಡರಾದ ಬಾಬಾಗೌಡ ಪಾಟೀಲ, ಮಲ್ಲಪ್ಪ ಮುಚ್ಚಂಡಿ, ನಿತಿನ ಚೌಗಲೆ, ಫಿರಾಜಿ ಅನಗೋಳಕರ, ಬಸವರಾಜ ತಳವಾರ, ಸಾಗರ ಮುಚ್ಚಂಡಿ, ಸವಿತಾ ಮುಚ್ಚಂಡಿ, ಸುನಿತಾ ತಳವಾರ, ಗಂಗವ್ವ ಪೂಜೇರಿ, ರಾಜು ದೇಸಾಯಿ, ಶಂಕರ ಜತ್ರಾಟಿ, ಅಡವೇಶ ಅಂಗಡಿ, ಅಭಯ ಅವಲಕ್ಕಿ, ಅರುಣ ಯಳ್ಳೂರಕರ, ಬಾಲ ಶಿವಾಜಿ ಯುವಕ ಮಂಡಳದ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು