ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಾಜಿ ಪ್ರತಿಮೆ ಲೋಕಾರ್ಪಣೆ: ಶಾಸ್ತ್ರೋಕ್ತ ಕಾರ್ಯಕ್ರಮಗಳಿಗೆ ಹೆಬ್ಬಾಳಕರ ಚಾಲನೆ

Last Updated 4 ಮಾರ್ಚ್ 2023, 12:58 IST
ಅಕ್ಷರ ಗಾತ್ರ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ, ಐತಿಹಾಸಿಕ ರಾಜಹಂಸಗಡ ಕೋಟೆಯ ಆವರಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್ ಪ್ರತಿಮೆ ಲೋಕಾರ್ಪಣೆ ಅಂಗವಾಗಿ ಶನಿವಾರ, ಕ್ಷೇತ್ರಪಾಲಕ ಸಿದ್ಧೇಶ್ವರ ದೇವರಿಗೆ ವಿಶೇಷ ಪೂಜೆ, ಹೋಮ, ಹವನ, ಅಭಿಷೇಕ ಸೇರಿದಂತೆ ಶಾಸ್ತ್ರೋಕ್ತ ವಿಧಾನಗಳನ್ನು ನೆರವೇರಿಸಲಾಯಿತು.

ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ್‌ ಹೆಬ್ಬಾಳಕರ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

‘ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ವಿವಿಧ ಕಾರ್ಯಕ್ರಮಗಳು ಆರಂಭವಾಗಲಿವೆ. ಪಲ್ಲಕ್ಕಿ ಉತ್ಸವ, ಸಾಂಪ್ರದಾಯಿಕ ಕಾರ್ಯಕ್ರಮಗಳು ನಡೆಯಲಿವೆ. 10 ಗಂಟೆಗೆ ದೇವಸ್ಥಾನ ಪ್ರವೇಶವಾಗಲಿದೆ. 10.30ರಿಂದ ಧ್ವಜಾರೋಹಣ, ಉತ್ಸವ ಮೂರ್ತಿ ಪೂಜಾ, ಡೋಲ್ ತಾಶಾದೊಂದಿಗೆ ಮೂರ್ತಿ ಉದ್ಘಾಟನೆಯಾಗಲಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ಹಲವಾರು ಗಣ್ಯರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಬೆಳಿಗ್ಗೆಯಿಂದ ರಾತ್ರಿಯವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಒಟ್ಟಾರೆ ಲಕ್ಷಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ’ ಎಂದು ಶಾಸಕಿ ಹೆಬ್ಬಾಳಕರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT