ಬೆಳಗಾವಿ ಜಿಲ್ಲೆಯಲ್ಲಿ 3 ಮಕ್ಕಳ ಸಾವು: ಡಿಸಿಯಿಂದ ಸಮಗ್ರ ವರದಿ ಕೇಳಿದ ಸಿಎಂ

ಬೆಂಗಳೂರು: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಮೂರು ಮಕ್ಕಳ ಸಾವು ಪ್ರಕರಣದ ಕುರಿತು ತನಿಖಾ ವರದಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿ ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಿದ್ದಾರೆ.
ದಡಾರ ರೋಗ ತಡೆಗೆ ನೀಡಲಾಗುವ ರುಬೆಲ್ಲಾ ಚುಚ್ಚುಮದ್ದನ್ನು ಪಡೆದ ಸಂದರ್ಭದಲ್ಲಿ ಆ ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಪ್ರಕರಣದ ಕುರಿತು ಮುಖ್ಯಮಂತ್ರಿಗಳು ಡಿಸಿ ಅವರಿಂದ ವಿವರವಾದ ವರದಿ ಕೇಳಿದ್ದಾರೆ.
ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.