ಬೆಳಗಾವಿ: ‘ಶಾಸಕ ರಮೇಶ ಜಾರಕಿಹೊಳಿ ಅವರ ವಿರುದ್ಧದ ಸಿ.ಡಿ. ಪ್ರಕರಣವನ್ನು ಎಸ್‌ಐಟಿಯು ಸಂಪೂರ್ಣ ನಿಷ್ಪಕ್ಷಪಾತವಾಗಿ ತನಿಖೆ ಮಾಡುತ್ತಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪೊಲೀಸ್ ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ. ಆದರೆ, ಕಾಂಗ್ರೆಸ್‌ನವರು ಇದರಲ್ಲಿ ದುರುದ್ದೇಶದ ರಾಜಕೀಯ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.

‘ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಮಾತನಾಡುತ್ತಿಲ್ಲದಿರುವುದನ್ನು ನೋಡಿದರೆ ಅವರಲ್ಲೇ ಹುಳುಕಿದೆ ಎನಿಸುತ್ತದೆ’ ಎಂಬ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ನಿತ್ಯವೂ ಗೃಹ ಸಚಿವರಿಂದ ಮಾಹಿತಿ ಪಡೆಯುತ್ತಿದ್ದೇನೆ. ಸಿದ್ದರಾಮಯ್ಯ ಜವಾಬ್ದಾರಿ ಸ್ಥಾನದಲ್ಲಿದ್ದು ಅದಕ್ಕೆ ತಕ್ಕಂತೆ ಮಾತನಾಡಬೇಕು’ ಎಂದು ತಿರುಗೇಟು ನೀಡಿದರು.

‘ಈ ಪ್ರಕರಣದಲ್ಲಿ ರಮೇಶ ಜಾರಕಿಹೊಳಿ ನಿರಪರಾಧಿಯಾಗಿ ಹೊರಬರುತ್ತಾರೆ. ಉಪ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗುವಂತೆ ಅವರಿಗೆ ಹೇಳಿದ್ದೇನೆ’ ಎಂದರು.

ಇವನ್ನೂ ಓದಿ...

ಸಿ.ಡಿ. ಪ್ರಕರಣ: ವಸಂತನಗರದ ನ್ಯಾಯಾಲಯದಲ್ಲಿ ಯುವತಿ ಹೇಳಿಕೆ ಸಂಗ್ರಹ

ಸಿ.ಡಿ.ಪ್ರಕರಣ: ಸಂತ್ರಸ್ತೆ ಯುವತಿ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.