ಬೆಂಗಳೂರು: ಪ್ರವಾಹದಿಂದ ಉಂಟಾಗಿರುವ ಹಾನಿ ಕುರಿತು ಅವಲೋಕಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾನುವಾರ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಈ ಕುರಿತು ಶನಿವಾರ ಬೆಳಿಗ್ಗೆ ಮಾಹಿತಿ ನೀಡಿರುವ ಮುಖ್ಯಮಂತ್ರಿಯವರ ಕಚೇರಿ, ‘ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿಯವರು ಭಾನುವಾರ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ’ ಎಂದು ತಿಳಿಸಿದೆ.

ಜಿಲ್ಲೆಯಲ್ಲೇ ಮೊಕ್ಕಾಂಗೆ ಸೂಚನೆ: ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಾಗೂ ಹೆಚ್ಚು ಮಳೆ ಬೀಳುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜತೆ ಮುಖ್ಯಮಂತ್ರಿಯವರು ಶನಿವಾರ ಬೆಳಿಗ್ಗೆ ದೂರವಾಣಿ ಮೂಲಕ ಚರ್ಚೆ ನಡೆಸಿದ್ದಾರೆ. ಸದ್ಯದ ಪರಿಸ್ಥಿತಿ ಕುರಿತು ಮಾಹಿತಿ ಪಡೆದಿದ್ದಾರೆ ಎಂದು ಮುಖ್ಯಮಂತ್ರಿಯವರ ಕಚೇರಿ ಪ್ರಕಟಣೆ ಹೇಳಿದೆ.

ಮಳೆ ಹಾಗೂ ಪ್ರವಾಹ ಪರಿಸ್ಥಿತಿ ಇರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲೇ ಇರುವಂತೆ ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ ಎಂದು ತಿಳಿಸಿದೆ.

ಇದನ್ನೂ ಓದಿ... ಗಂಗಾವಳಿ ಪ್ರವಾಹ: ಕೊಚ್ಚಿಹೋದ ಸೇತುವೆ, ದ್ವೀಪದಂತಾದ ಗ್ರಾಮಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.