ಭಾನುವಾರ, ಜೂನ್ 20, 2021
20 °C

ಬಿಮ್ಸ್‌ನಲ್ಲಿನ ವ್ಯವಸ್ಥೆ ಪರಿಶೀಲಿಸಿದ ಸಿಎಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಗುರುವಾರ ನಗರದಲ್ಲಿ ಆರಂಭಿಸಿರುವ ಜಿಲ್ಲಾ ಕೋವಿಡ್ ವಾರ್ ರೂಂ, ಬಿಮ್ಸ್ ಆಸ್ಪತ್ರೆ, ಲಸಿಕಾಕರಣ ಘಟಕ ಹಾಗೂ ಕೋವಿಡ್ ಕೇರ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲಿನ ವ್ಯವಸ್ಥೆಯನ್ನು ಅವಲೋಕಿಸಿದರು.

ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಕೇಂದ್ರಗಳಲ್ಲಿ ಹಾಸಿಗೆಗಳ ಲಭ್ಯತೆ, ಜಿಲ್ಲೆಯಲ್ಲಿ ಲಭ್ಯವಿರುವ ಆಮ್ಲಜನಕ ಹಾಸಿಗೆಗಳು, ವೆಂಟಿಲೇಟರ್ ಮತ್ತು ಆಮ್ಲಜನಕ ಸಂಗ್ರಹ ಸಾಮರ್ಥ್ಯದ ಬಗ್ಗೆ ಮಾಹಿತಿ ಪಡೆದರು. ‘ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿನ ವಾರ್ ರೂಂ ನಡುವೆ ಸಮನ್ವಯತೆ ಸಾಧಿಸಿ ಸೋಂಕಿತರ ಚಿಕಿತ್ಸೆ ಹಾಗೂ ಐಸೊಲೇಷನ್ ಮೇಲೆ ನಿಗಾ ವಹಿಸಬೇಕು’ ಎಂದು ಸಲಹೆ ನೀಡಿದರು.

‘ಬಿಮ್ಸ್ ಸೇರಿದಂತೆ ಸೇರಿದಂತೆ ಯಾವುದೇ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರ ಜತೆ ಆಸ್ಪತ್ರೆಯಲ್ಲಿ ಅವರ ಕುಟುಂಬದ ಯಾವುದೇ ಸದಸ್ಯರು ಅಥವಾ ಸಹಾಯಕರಿರುವುದು ಕಂಡುಬಂದಲ್ಲಿ ಅದಕ್ಕೆ ಆಯಾ ಆಸ್ಪತ್ರೆಯ ಮುಖ್ಯಸ್ಥರನ್ನೇ ಹೊಣೆ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ಯಾವುದೇ ಅವ್ಯವಸ್ಥೆ ಕಂಡುಬಂದರೆ ಸಂಬಂಧಿಸಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು