ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಅಗ್ನಿಶಾಮಕ ದಳದವರಿಗೆ ಮುಖ್ಯಮಂತ್ರಿ ಪದಕ ಪ್ರದಾನ

Last Updated 14 ಜುಲೈ 2021, 6:11 IST
ಅಕ್ಷರ ಗಾತ್ರ

ಬೆಳಗಾವಿ: 2015ರಿಂದ 2020ರ ಅವಧಿಯಲ್ಲಿ ಶ್ಲಾಘನೀಯ ಕಾರ್ಯನಿರ್ವಹಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹರಕ್ಷಕ ದಳ ಮತ್ತು ರಾಜ್ಯ ವಿಪತ್ತು ಸ್ಪಂದನಾ ಪಡೆಯ ಸಿಬ್ಬಂದಿಗೆ ಮುಖ್ಯಮಂತ್ರಿಯವರ ಚಿನ್ನದ ಪದಕವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಮಂಗಳವಾರ ಪ್ರದಾನ ಮಾಡಿದರು.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲಿನಲ್ಲಿ ಸಮಾರಂಭದಲ್ಲಿ, ಇಲ್ಲಿನ ಅಗ್ನಿಶಾಮಕ ಠಾಣೆಯ ಪ್ರಕಾಶ್ ಶಿಂಧೆ, ರಾಜ್ಯ ವಿಪತ್ತು ಸ್ಪಂದನಾ ಪಡೆ ‘ಸಿ’ ಕಂಪನಿಯ ಅಜಿತ ದುಂಡಪ್ಪ ಹಾಗೂ ಕಿರಣ ಕುರಬೇಟ ಪದಕಕ್ಕೆ ಭಾಜನರಾದರು.

2019ರಲ್ಲಿ ಧಾರವಾಡದಲ್ಲಿ ಸಂಭವಿಸಿದ ಕಟ್ಟಡ ಕುಸಿತ ದುರಂತದಲ್ಲಿ 56 ಮಂದಿ ಮತ್ತು ಹುಬ್ಬಳ್ಳಿಯಲ್ಲಿ ನಡೆದ ರೈಲ್ವೆ ಅಪಘಾತದಲ್ಲಿ 9 ಮಂದಿ ಪ್ರಾಣ ರಕ್ಷಣೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ಮತ್ತು 2019ರಲ್ಲಿ ಭೀಕರ ಪ್ರವಾಹ ಉಂಟಾದ ಸಂದರ್ಭದಲ್ಲಿ ಉತ್ತಮ ಕರ್ತವ್ಯ ನಿರ್ವಹಣೆಗಾಗಿ ಅವರಿಗೆ ಪುರಸ್ಕಾರ ಸಿಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT