ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡ್ಡಾಯವಾಗಿ ತಪಾಸಣೆಗೆ ಸೂಚನೆ: ಯುಕೇಶ್‌ಕುಮಾರ್‌

Last Updated 29 ಜೂನ್ 2021, 15:17 IST
ಅಕ್ಷರ ಗಾತ್ರ

ತೆಲಸಂಗ (ಬೆಳಗಾವಿ ಜಿಲ್ಲೆ): ಸಮೀಪದ ಕೊಟ್ಟಲಗಿ ಗ್ರಾಮದ ಹೊರವಲಯದ ಚೆಕ್‌ಪೋಸ್ಟ್‌ಗೆ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಯುಕೇಶ್‌ಕುಮಾರ್‌ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.

ನೆರೆಯ ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದಾಗಿ, ಚೆಕ್‌ಪೋಸ್ಟ್‌ನಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಮಹಾರಾಷ್ಟ್ರದಿಂದ ಗಡಿ ಮೂಲಕ ರಾಜ್ಯ ಪ್ರವೇಶಿಸುವ ಪ್ರತಿಯೊಬ್ಬರಿಂದಲೂ ಕೋವಿಡ್ ನೆಗೆಟಿವ್ ವರದಿ ಮತ್ತು ಕೋವಿಡ್ ಲಸೀಕೆ ಪಡೆದಿರುವುದನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಇದ್ಯಾವುದೂ ಇಲ್ಲದಿದ್ದರೆ ಪ್ರವೇಶವನ್ನು ಕಡ್ಡಾಯವಾಗಿ ನಿರಾಕರಿಸಬೇಕು’ ಎಂದು ಸೂಚಿಸಿದರು.

‘ಜನರು ಅನಗತ್ಯವಾಗಿ ಮಹಾರಾಷ್ಟ್ರದ ಗಡಿ ಗ್ರಾಮಗಳಿಗೆ ಓಡಾಡದಂತೆ ನಿಗಾ ವಹಿಸಬೇಕು. ಇದರಲ್ಲಿ ಯಾವುದೇ ಸಡಿಲಿಕೆ ಇಲ್ಲ. ಆದೇಶ ಉಲ್ಲಂಘಿಸಿದರೆ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ತೆಲಸಂಗ ಉಪ ತಹಶೀಲ್ದಾರ್‌ ಎಂ.ಎಸ್. ಯತ್ನಟ್ಟಿ, ಕಂದಾಯ ನಿರೀಕ್ಷಕ ಮುಬಾರಕ ಮುಜಾವರ, ಪಿಡಿಒ ಕುಮದಿನ್ನಿ ಶಿವಣ್ಣಗೋಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT