ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ | ಚುನಾವಣೆಗೆ ಅಗತ್ಯ ಸಿದ್ಧತೆ: ರಾಹುಲ್‌ ಶಿಂಧೆ

Published 18 ಮಾರ್ಚ್ 2024, 16:17 IST
Last Updated 18 ಮಾರ್ಚ್ 2024, 16:17 IST
ಅಕ್ಷರ ಗಾತ್ರ

ಚಿಕ್ಕೋಡಿ: ‘ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಬೆಳಗಾವಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ಶಿಂಧೆ ಹೇಳಿದರು.

ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚಿಕ್ಕೋಡಿಯಲ್ಲಿ 8,75,953 ಪುರುಷರು, 8,65,731 ಮಹಿಳೆಯರು, 74 ಇತರರು ಸೇರಿದಂತೆ 17,41,758 ಮತದಾರರಿದ್ದಾರೆ. 50,589 ಯುವ ಮತದಾರರು ಮೊದಲ ಬಾರಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮಾದರಿ ನೀತಿಸಂಹಿತೆ ಅನುಷ್ಠಾನಕ್ಕಾಗಿ 148 ಸೆಕ್ಟರ್ ಆಫೀಸರ್, 27 ಫ್ಲೈಯಿಂಗ್ ಸ್ಕ್ವಾಡ್, 21 ವಿಡಿಯೊ ಸರ್ವೆಲೆನ್ಸ್ ತಂಡ ಹಾಗೂ 8 ಜನ ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದೆ’ ಎಂದರು.

‘ಇಡೀ ಕ್ಷೇತ್ರದಲ್ಲಿ 32 ಚೆಕ್‌ಪೋಸ್ಟ್‌ ಸ್ಥಾಪಿಸಲಾಗಿದೆ. ಈ ಪೈಕಿ 18 ಚೆಕ್‌ಪೋಸ್ಟ್‌ ರಾಜ್ಯದ ಗಡಿ ಭಾಗದಲ್ಲಿವೆ’ ಎಂದು ತಿಳಿಸಿದರು.

ಜಿಲ್ಲಾ‌ ಪಂಚಾಯ್ತಿ ಉಪಕಾರ್ಯದರ್ಶಿ ಬಸವರಾಜ ಅಡವಿಮಠ, ತಹಶೀಲ್ದಾರ್‌ ಚಿದಂಬರ ಕುಲಕರ್ಣಿ, ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ, ಸಿಪಿಐ ನಾಗೇಶ ಕಾಡದೇವರಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT