ಚಿಕ್ಕೋಡಿ: ‘ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಲ್ಲರಿಗೂ ಸಮಾನತೆ ನೀಡಿದರು’ ಎಂದು ಖಡಕಲಾಟ ಠಾಣೆ ಪಿಎಸ್ಐ ಕೃಷ್ಣವೇಣಿ ಗೋರನಹೊಸೂರ ಹೇಳಿದರು.

ತಾಲ್ಲೂಕಿನ ಧುಳಗನವಾಡಿ ಗ್ರಾಮದಲ್ಲಿ ಚಿಕ್ಕೋಡಿಯ ಆಶಾದೀಪ ಸಮುದಾಯ ಕಲಾಕೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಭೀಮಗೀತ ಗಾಯನ ಕಲಾಸಂಭ್ರಮ ಉದ್ಘಾಟಿಸಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ವಿಶ್ವನಾಥ ಧುಮಾಳ ಮಾತನಾಡಿ, ‘ಶಿಕ್ಷಣದಿಂದ ಮಾತ್ರ ನಮ್ಮ ಬದುಕನ್ನು ಸುಂದರಗೊಳಿಸಿಕೊಳ್ಳಬಹುದಾಗಿದೆ’ ಎಂದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭೀಮಗೀತ ಗಾಯನ, ವೀರಗಾಸೆ ಕುಣಿತ, ಡೊಳ್ಳಿನ ಪದ, ಹಾಸ್ಯ ಅಭಿನಯ, ಗೀಗೀಪದ ಮುಂತಾದ ಮನೋರಂಜನಾ ಕಾರ್ಯಕ್ರಮಗಳನ್ನು ಕಲಾವಿದರು ಪ್ರದರ್ಶಿಸಿದರು.

ನಾಯಿಂಗ್ಲಜ ಗ್ರಾಮ ಪಂಚಾಯಿತಿ ಪಿಡಿಒ ಶಿವಾನಂದ ದೇಸಾಯಿ, ಶಿವಕುಮಾರ ಕಮತೆ, ಮಾರತಿ ಕಾಮಗೌಡ, ಭರತ ಕಲಾಚಂದ್ರ, ಅಪ್ಪಾಸಾಹೇಬ ಖೋತ, ಆನಂದ ಕಮತೆ, ಸುಪ್ರಿಯಾ ಕಲಾಚಂದ್ರ, ಸುಜಾತ ಮಗದುಮ್ಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-21-160606040

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.