ಚಿಕ್ಕೋಡಿ: ಭಾರತದ ಸಂವಿಧಾನವೇ ಕಾಂಗ್ರೆಸ್ ಸಿದ್ಧಾಂತವಾಗಿದೆ. ಸಂವಿಧಾನದ ಆಶಯದಂತೆಯೇ ಪಕ್ಷ ಕಾರ್ಯಕ್ರಮ, ಯೋಜನೆಗಳನ್ನು ರೂಪಿಸಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯಕುಮಾರ ಸೊರಕೆ ಹೇಳಿದರು.

ಪಟ್ಟಣದ ಪರಟಿ ನಾಗಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ಚಿಕ್ಕೋಡಿ ನೇತೃತ್ವದಲ್ಲಿ ಚಿಕ್ಕೋಡಿ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರ ಹಾಗೂ ಕಾರ್ಯಕರ್ತರ ಸಮಾರಂಭ ಉದ್ದೇಶಿಸಿ ಮಾತನಾಡಿದರು.

‘ದೇಶದಲ್ಲಿ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವ ಮನರೇಗಾ ಸೇರಿ 35 ಯೋಜನೆಗಳನ್ನು ನರೇಂದ್ರ ಮೋದಿ 12 ವರ್ಷಗಳಲ್ಲಿ ನಿಷ್ಕ್ರಿಯೆಗೊಳಿಸುತ್ತಾ ಬಂದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುವ ಮೂಲಕ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಗೆಲುವು ಸಾಧಸಿಬೇಕು’ ಎಂದು ಕರೆ ನೀಡಿದರು.

ಕಾಂಗ್ರೆಸ್ ಮುಖಂಡ ಸುಧೀರ ಕುಮಾರ ಪುರೋಹಿತ ಮಾತನಾಡಿ, ‘ಕೇಂದ್ರದಲ್ಲಿ ಕಳೆದ 12 ವರ್ಷಗಳಿಂದ ಮೋದಿ ನೇತೃತ್ವದ ಸರ್ಕಾರ ಕೇವಲ ಪ್ರಚಾರವನ್ನು ಮಾತ್ರ ಮಾಡುತ್ತಿದೆ. ಕೆಲಸವನ್ನೇ ಮಾಡಿಲ್ಲ. ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಸೇರಿದಂತೆ ಪಕ್ಷದ ಶಾಸಕರಿಂದ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳು ಮನೆ ಮನೆಗೆ ತಲುಪುತ್ತಿವೆ ಎಂದರು.

ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಪದಾಧಿಕಾರಿಗಳಾದ ರೋಹನ ಸಾಳ್ವೆ, ಶಂಭು ಶೆಟ್ಟಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಮುನೀರ, ಮಲ್ಲಿಕಾರ್ಜುನ ರಾಶಿಂಗೆ, ರಮೇಶ ಪಾಟೀಲ, ಅನಿಲ ಮಾನೆ, ಪ್ರಭಾಕರ ಕೋರೆ, ರಾಮಕೃಷ್ಣ ಪಾನಬುಡೆ, ಕಿಶೋರ ಪವಾರ, ಭೀಮಸೇನ ಕಾಂಬಳೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-21-1847310895

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.