ಚಿಕ್ಕೋಡಿ: ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಚಿಕ್ಕೋಡಿ ಜಿಲ್ಲೆಯನ್ನು ಘೋಷಣೆ ಮಾಡುವಂತೆ ಒತ್ತಾಯಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯಿಂದ ಸೋಮವಾರ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ಮಾಡಲಾಯಿತು.

ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಅಭಿವೃದ್ಧಿ ಹೊಂದಲು ಬೆಳಗಾವಿಯನ್ನು ವಿಭಜಿಸಿ ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಬೆಳಗಾವಿಯ ಅಧಿವೇಶನದಲ್ಲಿ ಘೋಷಣೆ ಮಾಡಬೇಕು. ವಾರದೊಳಗಾಗಿ ಚಿಕ್ಕೋಡಿ ಜಿಲ್ಲೆ ಘೋಷಣೆ ಮಾಡದಿದ್ದಲ್ಲಿ ಶುಕ್ರವಾರ ಅಥವಾ ಶನಿವಾರ ರೈಲು ತಡೆ ಚಳವಳಿ ಹಮ್ಮಿಕೊಳ್ಳುವುದಾಗಿ ಮುಖಂಡ ನಾಗೇಶ ಮಾಳಿ ಆಗ್ರಹಿಸಿದರು.

ಚಿಕ್ಕೋಡಿ ಜಿಲ್ಲೆ ಘೋಷಣೆಗೆ ಒತ್ತಾಯಿಸಿ 3 ದಶಕಗಳಿಂದ ಹೋರಾಟ ನಡೆಯುತ್ತಲೇ ಇದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಮೊದಲು ಮಾತು ಕೊಟ್ಟಂತೆ ಚಿಕ್ಕೋಡಿ ಜಿಲ್ಲೆಯನ್ನು ಘೋಷಿಸಿ ಮಾತು ಉಳಿಸಿಕೊಳ್ಳಬೇಕು ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಎಸ್.ವೈ.ಹಂಜಿ ಒತ್ತಾಯಿಸಿ ಗ್ರೇಡ್– 2 ತಹಶೀಲ್ದಾರ್ ಪರಿಮಳಾ ದೇಶಪಾಂಡೆ ಅವರಿಗೆ ಮನವಿ ಸಲ್ಲಿಸಿದರು.

ಕಾರ್ಯಾಧ್ಯಕ್ಷ ರುದ್ರಪ್ಪ ಸಂಗಪ್ಪಗೋಳ, ಸುರೇಶ ಬ್ಯಾಕುಡೆ, ನಾಗೇಶ ಮಾಳಿ, ಭರತ ಕಲಾಚಂದ್ರ, ಕೃಷ್ಣ ಕೆಂಚನ್ನವರ, ಸಂಜಯ ಪಾಟೀಲ, ಕುಮಾರ ಗುಡೆ, ರಾಜೇಂದ್ರ ಗಸ್ತಿ, ವೈಶಾಲಿ ಭೋಸಲೆ, ಸುರೇಶ ಇಟಕರ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.