ಚಿಕ್ಕೋಡಿ: 2024-25ನೇ ಸಾಲಿನ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅಡಿ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತಾಲ್ಲೂಕಿನ 1061 ಹಾಗೂ ನಿಪ್ಪಾಣಿ ತಾಲ್ಲೂಕಿನ 67 ಪ್ರಸ್ತಾವಗಳು, ಹಿಂಗಾರು ಹಂಗಾಮಿನಲ್ಲಿ 13 ಪ್ರಸ್ತಾವಗಳು ಚಿಕ್ಕೋಡಿ ತಾಲ್ಲೂಕಿನಿಂದ ತಿರಸ್ಕೃತಗೊಂಡಿವೆ. ಬೆಳೆವಿಮೆ ನೋಂದಣಿ ಹಾಗೂ ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ಹೋಲಿಕೆ ಆಗದ್ದರಿಂದ ತಿರಸ್ಕೃತಗೊಂಡಿವೆ ಎಂದು ಚಿಕ್ಕೋಡಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಡಿ.ಬಿ. ಚವ್ಹಾಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಿರಸ್ಕೃತಗೊಂಡ ಪಟ್ಟಿಯನ್ನು ಚಿಕ್ಕೋಡಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ರೈತ ಸಂಪರ್ಕ ಕೇಂದ್ರಗಳಾದ ಚಿಕ್ಕೋಡಿ, ನಾಗರಮುನ್ನೋಳಿ, ಸದಲಗಾ ಹಾಗೂ ನಿಪ್ಪಾಣಿಯ ಕಚೇರಿಯ ಸೂಚನಾ ಫಲಕಕ್ಕೆ ಲಗತ್ತಿಸಲಾಗಿದೆ. ಈ ಕುರಿತು ಆಕ್ಷೇಪಗಳಿದ್ದಲ್ಲಿ ರೈತರು ನಿಖರವಾದ ದಾಖಲಾತಿಗಳಾದ ಬೆಳೆ ನಮೂದಾದ ಪಹಣಿ (ಉತಾರ), ಬೆಂಬಲ ಬೆಲೆ ಪ್ರಯೋಜನ ಪಡೆದ ರಶೀದಿ, ಎಪಿಎಂಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ ದಾಖಲೆಗಳನ್ನು 15 ದಿನಗಳೊಳಗಾಗಿ ಸಂಬಂಧಿಸಿದ ಕಚೇರಿಯಲ್ಲಿ ಸಲ್ಲಿಸುವಂತೆ ಅವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-21-907803397

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.