ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾರಿನಲ್ಲಿ ಭಸ್ಮವಾದ ಚಿಕ್ಕೋಡಿ ಗ್ರಾನೈಟ್‌ ಉದ್ಯಮಿ ಫೈರೋಜ್ ಬಡಗಾಂವಿ

Published : 2 ಅಕ್ಟೋಬರ್ 2024, 8:32 IST
Last Updated : 2 ಅಕ್ಟೋಬರ್ 2024, 8:32 IST
ಫಾಲೋ ಮಾಡಿ
Comments

ಚಿಕ್ಕೋಡಿ (ಬೆಳಗಾವಿ): ಇಲ್ಲಿನ ಮುಲ್ಲಾ ಪ್ಲಾಟ್‌ ನಿವಾಸಿ, ಗ್ರಾನೈಟ್‌ ಉದ್ಯಮಿ ಫೈರೋಜ್ ಬಡಗಾಂವಿ (40) ಅವರ ಶವ ಬುಧವಾರ, ಕಾರಿನಲ್ಲಿ ಸಂಪೂರ್ಣ ಸುಟ್ಟುಹೋದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ತಾಲ್ಲೂಕಿನ ಜೈನಾಪೂರ ಗ್ರಾಮದ ಹೊರವಲಯದ ಸಂಕೇಶ್ವರ– ಜೇವರ್ಗಿ ರಾಜ್ಯ ಹೆದ್ದಾರಿ ಪಕ್ಕ ಅವರ ಕಾರು ಬೆಂಕಿಗೆ ಆಹುತಿಯಾಗಿದೆ. ಕಾರು ಸಂಪೂರ್ಣ ಸುಟ್ಟುಹೋಗಿದ್ದು, ಚಾಲಕನ ಸೀಟಿನಲ್ಲಿ ಕುಳಿತಿದ್ದ ಫೈರೋಜ್‌ ಕೂಡ ಬೆಂದುಹೋಗಿದ್ದಾರೆ. ಈ ಘಟನೆ ಮಂಗಳವಾರ ತಡರಾತ್ರಿ ನಡೆದಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.

ರಾಜ್ಯ ಹೆದ್ದಾರಿಯಲ್ಲಿ ಹಗಲು– ರಾತ್ರಿ ನಿರಂತರವಾಗಿ ವಾಹನಗಳ ಓಡಾಟ ಇದ್ದೇ ಇರುತ್ತದೆ. ಆದರೂ ಬೆಂಕಿಯನ್ನು ಯಾರೂ ಏಕೆ ಗಮನಿಸಿಲ್ಲ ಎಂಬುದು ಸಂದೇಹಕ್ಕೆ ಕಾರಣವಾಗಿದೆ. ಬುಧವಾರ ಮಧ್ಯಾಹ್ನ ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಕೂಡ ಭೇಟಿ ನೀಡಿ ಪರಿಶೀಲಿಸಿದರು.

ಚಿಕ್ಕೋಡಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಅಪಘಾತವಾಗಿ ಬೆಂಕಿ ಹೊತ್ತಿಕೊಂಡಂತೆ ಕಾಣುತ್ತಿದೆ. ಆದರೂ ಸಾವು ಅನುಮಾನಾಸ್ಪದವಾಗಿದೆ. ಮೃತನ ಕುಟುಂಬದವರ ದೂರು ಆಧರಿಸಿ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಚಿಕ್ಕೋಡಿ ತಾಲ್ಲೂಕಿನ ಜೈನಾಪೂರ ಗ್ರಾಮದ ಹೊರವಲಯದ ಸಂಕೇಶ್ವರ– ಜೇವರ್ಗಿ ರಾಜ್ಯ ಹೆದ್ದಾರಿ ಪಕ್ಕ ಬೆಂಕಿಗೆ ಆಹುತಿಯಾದ ಕಾರು

ಚಿಕ್ಕೋಡಿ ತಾಲ್ಲೂಕಿನ ಜೈನಾಪೂರ ಗ್ರಾಮದ ಹೊರವಲಯದ ಸಂಕೇಶ್ವರ– ಜೇವರ್ಗಿ ರಾಜ್ಯ ಹೆದ್ದಾರಿ ಪಕ್ಕ ಬೆಂಕಿಗೆ ಆಹುತಿಯಾದ ಕಾರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT