ಚಿಕ್ಕೋಡಿ: ‘ಹಿರೇಕೋಡಿ ಗ್ರಾಮದಲ್ಲಿ ₹ 26.85 ಕೋಟಿ ಮೊತ್ತದ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮದಲ್ಲಿ ಚರಂಡಿ, ರಸ್ತೆ, ಸಮುದಾಯ ಭವನ, ಶಾಲೆ, ಕಾಲೇಜುಗಳ ಕಟ್ಟಡ ನಿರ್ಮಾಣ ಮಾಡುವ ಮೂಲಕ ಸಮಗ್ರ ಅಭಿವೃದ್ಧಿ ಮಾಡಲಾಗುವುದು’ ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು.

ತಾಲ್ಲೂಕಿನ ಹಿರೇಕೋಡಿ ಗ್ರಾಮದಲ್ಲಿ ಗುರುವಾರ ₹ 1.25 ಕೋಟಿ ಮೊತ್ತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘₹ 16 ಕೋಟಿ ಮೊತ್ತದಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪಿಯು ಕಾಲೇಜು ಕಟ್ಟಡ, ₹ 8.88 ಕೋಟಿ ವೆಚ್ಚದಲ್ಲಿ ವಸತಿ ಶಾಲೆಯ ಬಹುಮಹಡಿ ಕಟ್ಟಡ, ₹ 1.97 ಕೋಟಿ ಅನುದಾನದಲ್ಲಿ ಶಾಲೆಗಳಿಗೆ ಹೆಚ್ಚುವರಿ ಕೊಠಡಿ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಶೀಘ್ರದಲ್ಲಿಯೇ ಕಾಮಗಾರಿಗಳನ್ನು ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು’ ಎಂದು ಭರವಸೆ ನೀಡಿದರು.

₹ 50 ಲಕ್ಷ ಮೊತ್ತದಲ್ಲಿ ಪರಿಶಿಷ್ಟ ಜಾತಿ ಕಾಲೊನಿ ಸೇರಿದಂತೆ ವಿವಿಧೆಡೆ ಸಿ.ಸಿ. ರಸ್ತೆ ಹಾಗೂ ಚರಂಡಿ ನಿರ್ಮಾಣ, ₹ 50 ಲಕ್ಷ ಮೊತ್ತದಲ್ಲಿ ರಸ್ತೆ ನಿರ್ಮಾಣ ಹಾಗೂ ₹ 25 ಲಕ್ಷ ಮೊತ್ತದಲ್ಲಿ ಹನುಮಾನ ದೇವಸ್ಥಾನದ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸುರೇಶ ಚೌಗಲಾ, ಬಾಬರ್ ಪಟೇಲ, ಬಾಬಾಸಾಬ ಗುಡಿಮನಿ, ಮಹಾದೇವ ಪವಾಡಿ, ದಾದಾ ಪಟೇಲ, ರಾಮಾ ಬಂಡಗರ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಬಿ.ಎ. ನಾಯಕವಾಡಿ, ಕಿರಿಯ ಎಂಜಿನಿಯರ್ ಜಿ.ಎಸ್. ಕಾಮಕರ, ಗುತ್ತಿಗೆದಾರ ರಾವಸಾಬ ಫಕೀರೆ, ಪಿಡಿಒ ರೇಖಾ ಬೆಳಕೂಡೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-21-1593360519

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.