ಚಿಕ್ಕೋಡಿ: ತಾಲ್ಲೂಕಿನ ಮನೂಚಿವಾಡಿ ಗ್ರಾಮದಲ್ಲಿ ಶಾಸಕ ಗಣೇಶ ಹುಕ್ಕೇರಿ ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಪ್ರಯತ್ನದಿಂದ ಬಿಡುಗೆಯಾದ ₹ 1 ಕೋಟಿ ಮೊತ್ತದಲ್ಲಿ ರಸ್ತೆ ಕಾಮಗಾರಿಗೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸತೀಶ ಪಾಟೀಲ ಬುಧವಾರ ಚಾಲನೆ ನೀಡಿದರು.

ಕಾರ್ಯಕ್ರಮ ಉದ್ದೇಶಿಸಿ ಸತೀಶ ಪಾಟೀಲ ಮಾತನಾಡಿ, ’ಗಣೇಶ ಹುಕ್ಕೇರಿ ಹಾಗೂ ಪ್ರಕಾಶ ಹುಕ್ಕೇರಿ ಅವರ ಜನಪ್ರಿಯ ಕೆಲಸಗಳು ಕ್ಷೇತ್ರದ ಜನರ ಮನ ಗೆದ್ದಿವೆ. ಇಂತಹ ಕ್ರಿಯಾಶೀಲ ಜನಪ್ರತಿನಿಧಿಗಳ ಬೆಂಬಲದಿಂದ ಗ್ರಾಮ ಸರ್ವಾಂಗೀಣ ಅಭಿವೃದ್ಧಿಯಾಗುವುದು ಸಾಧ್ಯವಿದೆ’ ಎಂದು ಹೇಳಿದರು.

ಖಡಕಲಾಟದ ಅಪ್ಪನವರ ಮಠದ ಶಿವಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ’ರಸ್ತೆಗಳು ಗ್ರಾಮದ ಅಭಿವೃದ್ಧಿಯ ನಾಡಿಮಿಡಿತವಿದ್ದಂತೆ. ರೈತರು ತಮ್ಮ ಬೆಳೆಯನ್ನು ಮಾರುಕಟ್ಟೆಗೆ ಸಾಗಿಸಲು ಉತ್ತಮ ರಸ್ತೆಗಳ ಅವಶ್ಯಕತೆ ಇದೆ. ರಸ್ತೆ ಕಾಮಗಾರಿ ಗುಣಮಟ್ಟದಿಂದ ಕೂಡಿ ಸಾರ್ವಜನಿಕರಿಗೆ ಶೀಘ್ರ ಲಭ್ಯವಾಗುವಂತಾಗಲಿ’ ಎಂದರು.

ಸ್ಥಳೀಯ ಮುಖಂಡರಾದ ಸತೀಶ ಪಾಟೀಲ, ಧರ್ಮಾ ಖೋತ, ಶರದ ಖೋತ, ಕಿರಣ ಖೋತ, ರಾಹುಲ ಜಾಧವ, ಪ್ರವೀಣ ಪಾಟೀಲ, ದಿಲೀಪ ಪಾಟೀಲ, ಗೌತಮ ಕಾವಡಕರ, ವಿಜಯ ಖೋತ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-21-594318838

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.