ಚಿಕ್ಕೋಡಿ: ‘ಸರ್ಕಾರ ನಿಗದಿಪಡಿಸಿದ ಶುಲ್ಕದಲ್ಲಿ ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಶಿಕ್ಷಣ ನೀಡುವ ಉದ್ದೇಶದಿಂದ ನಿರ್ಮಿಸಲಾಗಿರುವ ಶಮನೇವಾಡಿ ಸಮೀಪದ ನೇಜ ಕ್ರಾಸ್ ಬಳಿ ಎ.ಜಿ.ಎಂ. ಎಂಜಿನಿಯರಿಂಗ್ ಕಾಲೇಜು ಉದ್ಘಾಟನೆ ಹಾಗೂ 151 ಅಡಿ ಎತ್ತರದ ಕಲ್ಲಿನ ಪಾರ್ಶ್ವನಾಥರ ಬೃಹತ್ ವಿಗ್ರಹ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ ಮೇ 24, 25, 26ರಂದು ನಡೆಯಲಿದೆ’ ಎಂದು ಹುಬ್ಬಳ್ಳಿಯ ವರೂರಿನ ರಾಷ್ಟ್ರಸಂತ ಆಚಾರ್ಯ ಗುಣಧರನಂದಿ ಮುನಿಮಹಾರಾಜರು ಹೇಳಿದರು.

ತಾಲ್ಲೂಕಿನ ಶಮನೇವಾಡಿ ಸಮೀಪದ ನೇಜ ಕ್ರಾಸ್ ಬಳಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೇ 24ರಂದು ಹಮ್ಮಿಕೊಂಡ ಅಭಿಷೇಕ, ವಾಸ್ತುವಿಧಾನ, ಆರತಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಚಿಕ್ಕೋಡಿ-ಸದಲಗಾ ಶಾಸಕ ಗಣೇಶ ಹುಕ್ಕೇರಿ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ, ಮಾಜಿ ಸಚಿವ ವೀರಕುಮಾರ ಪಾಟೀಲ ಭಾಗವಹಿಸವರು" ಎಂದು ತಿಳಿಸಿದರು. ‘ಮೇ 25ರಂದು ಭಗವಾನ ಪಾರ್ಶ್ವನಾಥ ವಿಧಾನ ಮತ್ತು ಸರಸ್ವತಿ ಮೂರ್ತಿ ಶುದ್ಧೀಕರಣ ಹಾಗೂ ಪಿಯುಸಿ ಕಾಲೇಜುಗಳ ಪ್ರಾಂಶುಪಾಲರ ಸತ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಶಾಸಕ ಲಕ್ಷ್ಮಣ ಸವದಿ, ಯುವ ಮುಖಂಡ ಉತ್ತಮ ಪಾಟೀಲ, ಅಣ್ಣಾಸಾಹೇಬ ಹವಲೆ ಆಗಮಿಸಲಿದ್ದಾರೆ’ ಎಂದರು. ‘ಮೇ 26ರಂದು ಬೆಳಿಗ್ಗೆ 9 ಗಂಟೆಗೆ ಸರಸ್ವತಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಎ.ಜೆ.ಎಂ ಎಂಜಿನಿಯರಿಂಗ್ ಕಾಲೇಜು ಉದ್ಘಾಟನೆಯನ್ನು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಮಾಡುವರು. ಮುಖ್ಯ ಅತಿಥಿಗಳಾಗಿ ಬಿಜೆಪಿ ಹಿರಿಯ ಮುಖಂಡ ಬಿ.ಎಲ್. ಸಂತೋಷ ಆಗಮಿಸುವರು. ಮೂರು ದಿನಗಳ ಕಾಲ ಸಂಜೆ ವಿವಿಧ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು. ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮಗಳ ಸಾನ್ನಿದ್ಯವನ್ನು ಹುಬ್ಬಳ್ಳಿ-ವರೂರಿನ 108 ಗುಣಧರನಂದಿ ಮುನಿ ಮಹಾರಾಜರು, ವರೂರಿ ಧರ್ಮಸೇನ ಭಟ್ಟಾರಕ ಸ್ವಾಮೀಜಿ, ನಾಂದಣಿಯ ಜಿನಸೇನ ಭಟ್ಟಾರಕ ಸ್ವಾಮೀಜಿ, ಕೊಲ್ಹಾಪುರದ ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿ ವಹಿಸುವರು. ಸುದ್ದಿಗೋಷ್ಠಿಯಲ್ಲಿ ಶಮನೇವಾಡಿಯ ಗುಣಧರ ತೀರ್ಥ ಸಮಿತಿಯ ಪದಾಧಿಕಾರಿಗಳಾದ ಕುಮಾರ ಮಗದುಮ್ಮ, ಬಾಹುಬಲಿ ಶಿರಗುಪ್ಪೆ, ಬಾಬಣ್ಣ ಖೋತ, ಜಯಕುಮಾರ ಖೋತ, ತಾತ್ಯಾಸಾಹೇಬ ಖೋತ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-21-167619045

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.