ಚಿಕ್ಕೋಡಿ: ತಾಲ್ಲೂಕಿನ ಹಿರೇಕೋಡಿ ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯ ಜಾಗೆಯನ್ನು ಅತಿಕ್ರಮಿಸಿ ರಸ್ತೆ ನಿರ್ಮಿಸುತ್ತಿರುವ ಕ್ರಮ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಸ್ಥಳೀಯರು ಶುಕ್ರವಾರ ಪಟ್ಟಣದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಿದರು.

ಕರವೇ ಚಿಕ್ಕೋಡಿ ತಾಲ್ಲೂಕು ಅಧ್ಯಕ್ಷ ಸಂಜು ಬಡಿಗೇರ ಮಾತನಾಡಿ, ದಾನಿಗಳು ಸರ್ಕಾರಿ ಶಾಲೆ ನಿರ್ಮಾಣಕ್ಕಾಗಿ ನೀಡಿದ ಜಾಗೆಯಲ್ಲಿಯೇ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಇದನ್ನು ತಡೆಯದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜನಪ್ರತಿನಿಧಿಗಳ ಹಾಗೂ ಸಂಬಂಧಿಸಿದ ಅಧಿಕಾರಿಗಳ ನಡೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಚಿಕ್ಕೋಡಿ ತಾಲ್ಲೂಕು ಘಟಕದಿಂದ ಗ್ರೇಡ್ 2 ತಹಶೀಲ್ದಾರ್ ಕಿರಣ ಬೆಳವಿ ಅವರಿಗೆ ಮನವಿ ನೀಡಲಾಯಿತು.

ಚಂದ್ರಕಾಂತ ಹುಕ್ಕೇರಿ, ಸುಭಾಷ ಬಾಳಿಕಾಯಿ, ರಾಜೇಂದ್ರ ಕಾಂಬಳೆ, ರಫೀಕ ಪಠಾಣ, ರಮೇಶ ಡಂಗೇರ, ಸಾಗರ ನಿಂಗಾಗೋಳ, ಚನ್ನಪ್ಪ ಮಂಟೂರ, ಅಣ್ಣಪ್ಪ ಪೂಜಾರಿ, ಸುರೇಶ ಫರಿತೆ, ಸಾತ್ವಿಕ ಕಟ್ಟಿ, ಶಂಕರ ಚೌಗಲಾ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-21-494163173

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.