ಚಿಕ್ಕೋಡಿ: ‘ಕೇಂದ್ರದಲ್ಲಿ ಬಿಜೆಪಿ ಸರ್ಕಾರ ನಾರಿಶಕ್ತಿ ವಂದನೆ ಮಸೂದೆಯ ಬದಲಾಗಿ 2023ರ ಮಹಿಳಾ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕು’ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಆಗ್ರಹಿಸಿದರು.

ಚಿಕ್ಕೋಡಿ ಪಟ್ಟಣದಲ್ಲಿ ಚಿಕ್ಕೋಡಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕ ವತಿಯಿಂದ ಈಚೆಗೆ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ‘ರಾಜೀವ್ ಗಾಂಧಿ ಪ್ರಧಾನಮಂತ್ರಿಯಾಗಿದ್ದ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ 33 ಮೀಸಲಾತಿ ತರಲಾಗಿತ್ತು. ಕಾಂಗ್ರೆಸ್ ಮಹಿಳಾ ವಿರೋಧಿ ಎಂಬ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ’ ಎಂದು ಕಿಡಿಕಾರಿದರು.

‘ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳಾ ಮೀಸಲಾತಿ ತರುವ ಮಸೂದೆಯನ್ನು ತರಾತುರಿಯಲ್ಲಿ ಮಂಡಿಸಿದ್ದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಮಣಿಪುರ, ಉತ್ತರ ಪ್ರದೇಶ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದರೂ ಅದನ್ನು ವಿರೋಧಿಸುವ ಗೋಜಿಗೆ ಹೋಗದ ಬಿಜೆಪಿಯ ಮಹಿಳೆಯರ ಕಾಳಜಿ ತೋರುವ ಬಣ್ಣ ಕಳಚಿದಂತಾಗಿದೆ’ ಎಂದರು.

ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಮಾತನಾಡಿ, ‘ಮಹಿಳಾ ಮೀಸಲಾತಿ ಮಸೂದೆಯೊಂದಿಗೆ ಕ್ಷೇತ್ರ ಪುನರ್ ವಿಂಗಡಣೆ ಮಾಡಲು ಹೊರಟಿದ್ದ ಬಿಜೆಪಿ ಸರ್ಕಾರದ ಕ್ರಮ ಸಂಶಯಕ್ಕೆ ಎಡೆ ಮಾಡಿಕೊಡುವಂತಿತ್ತು. ಹೀಗಾಗಿಯೇ ಸಂಸತ್ತಿನಲ್ಲಿ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳು ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿದ್ದವು’ ಎಂದು ಹೇಳಿದರು.

ಚಿಕ್ಕೋಡಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲಾ ಪಾಟೀಲ, ಗಣೇಶ ಮೋಹಿತೆ, ಮುಖಂಡ ಪ್ರಭಾಕರ ಐ ಕೋರೆ, ರಾಯಬಾಗನ ನಗರ ತನುಜಾ ಸಿಂಗೆ, ಲಕ್ಷ್ಮೀ ಪಾಟೀಲ, ರೇಖಾ ದಾದುಗೋಳ, ರಾಜು ಕೊಟಗಿ ಮುಂತಾದವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-21-1059836679

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.