ಚಿಕ್ಕೋಡಿ: ಪಟ್ಟಣದ ಕೆಎಲ್ಇ ಆಯುರ್ವೇದ ವೈದ್ಯಕೀಯ ಕಾಲೇಜು ಆವರಣದಲ್ಲಿ ಆಯುಷ್ ಸಚಿವಾಲಯ, ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಆರೋಗ್ಯ ಸಂಸ್ಥೆ ಸಹಯೋಗದಲ್ಲಿ ಬುಧವಾರ ಯೋಗ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಚಿಕ್ಕೋಡಿಯ ಚರಮೂರ್ತಿ ಮಠದ ಸಂಪಾದನಾ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮವನ್ನು ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರಿನ ಉಪಾಧ್ಯಕ್ಷ ಜಗದೀಶ ಕವಟಗಿಮಠ ಉದ್ಘಾಟಿಸಿದರು. 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ವಿಶೇಷ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಯೋಗ ವಿಭಾಗದ ಮುಖ್ಯಸ್ಥ ಸಂತೋಷ ಶಿವಣ್ಣವರ ಸೇರಿದಂತೆ ಯೋಗಪಟುಗಳು ವಿವಿಧ ಆಸನ, ಪ್ರಾಣಾಯಾಮ ಹೇಳಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಕಿರಣಕುಮಾರ ಮುತ್ನಾಳೆ ವಹಿಸಿದ್ದರು. ಯೋಗ ವಿಭಾಗದ ಮುಖ್ಯಸ್ಥ ಸಂತೋಷ ಶಿವಣ್ಣವರ, ನಿಂಗಪ್ಪ ಪೂಜಾರಿ, ಸುಧೀಂದ್ರ ಹೊನವಾಡ, ರವಿ ಮಡಿವಾಳರ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-21-1013648917

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.