ಚಿಕ್ಕೋಡಿ: ‘ಆಧುನಿಕ ಸಮಾಜದಲ್ಲಿ ಮಾದಕವಸ್ತುಗಳಾದ ಗಾಂಜಾ, ಕೊಕೇನ್, ಚರಸ್, ಅಫೀಮು ಸೇವನೆಯಿಂದ ಯುವ ಜನತೆ ದಾರಿ ತಪ್ಪುತ್ತಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿ ಒಳ್ಳೆಯ ಆಲೋಚನೆಯೊಂದಿಗೆ ಉತ್ತಮ ಸಮಾಜ ನಿರ್ಮಾಣದ ಗುರಿ ಹೊಂದಬೇಕು’ ಎಂದು ಚಿಕ್ಕೋಡಿ ಪಿಎಸ್ಐ ಬಸಗೌಡ ನೇರ್ಲಿ ಹೇಳಿದರು.

ಪಟ್ಟಣದ ಕೆಎಲ್ಇ ಸಂಸ್ಥೆಯ ಬಸಪ್ರಭು ಕೋರೆ ಪದವಿ ಮಹಾವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಎನ್ಸಿಸಿ ಘಟಕ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಾದಕದ್ರವ್ಯ ವ್ಯಸನ ತಡೆ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಉತ್ತಮ ಸಲಹೆ ಹಾಗೂ ಮಾರ್ಗದರ್ಶನದ ಮೂಲಕ ಒಳ್ಳೆಯ ಬದುಕನ್ನು ಯುವ ಜನತೆ ಕಟ್ಟಿಕೊಳ್ಳಬೇಕು’ ಎಂದರು.

ಯುವ ನಾಯಕ ಚೇತನ ಪಾಟೀಲ ಮಾತನಾಡಿ, ‘ಮಾದಕ ವ್ಯಸನದಿಂದ ಮಾನಸಿಕ ಹಾಗೂ ದೈಹಿಕವಾಗಿ ತೊಂದರೆ ಅನುಭವಿಸಬೇಕಾಗುತ್ತದೆ. ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ದಾಸರಾಗುವದನ್ನು ತಪ್ಪಿಸಬೇಕಿದೆ’ ಎಂದರು. ಕಾಲೇಜಿನ ಪ್ರಾಚಾರ್ಯ ಬಿ.ಜಿ. ಕುಲಕರ್ಣಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥ ಸದಾಶಿವ ಹಾದಿಮನಿ, ಎನ್ಸಿಸಿ ಅಧಿಕಾರಿ ಲೆಫ್ಟಿನೆಂಟ್ ಸಿದ್ದಣ್ಣಾ ನಾಯಕ, ದಿವ್ಯಶ್ರೀ ನೇರ್ಲಿ, ಸುಕನ್ಯಾ ಮನಗುತ್ತೆ, ಸೃಷ್ಟಿ ಅಮ್ಮಣಗಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-21-1797999661

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.