ಬೆಳಗಾವಿ: ‘ದೇಶದ ಆಸ್ತಿಯಾಗಿರುವ ಮಕ್ಕಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಮಕ್ಕಳ ಸಂರಕ್ಷಣೆಯ ಭಾಗಿದಾರರಾದ ಎಲ್ಲ ಇಲಾಖೆ ಅಧಿಕಾರಿಗಳು ಸಮುದಾಯದ ಸಹಭಾಗಿತ್ವ ಪಡೆದು ಪರಿಣಾಮಕಾರಿಯಾಗಿ ತಮ್ಮ ಕಾರ್ಯನಿರ್ವಹಿಸಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶರಾದ ಸಂದೀಪ ಪಾಟೀಲ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಅಬಕಾರಿ ಇಲಾಖೆ, ಮಕ್ಕಳ ಕಲ್ಯಾಣ ಸಮಿತಿ, ನಿರಾಶ್ರಿತರ ಪುನರ್ವಸತಿ ಕೇಂದ್ರ, ಸ್ಪಂದನಾ ಸಂಸ್ಥೆ ಆಶ್ರಯದಲ್ಲಿ ಮಗಳವಾರ ಆಯೋಜಿಸಿದ್ದ ಮಕ್ಕಳ ರಕ್ಷಣಾ ಕಾರ್ಯಾಚರಣೆ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಮಕ್ಕಳ ರಕ್ಷಣಾ ಕಾರ್ಯಚರಣೆಯಲ್ಲಿ ಭಾಗಿದಾರರಾದ ಎಲ್ಲ ಇಲಾಖೆ ಅಧಿಕಾರಿಗಳು ಮಕ್ಕಳ ರಕ್ಷಣೆಯಲ್ಲಿ ಜಾಗರೂಕತೆಯಿಂದ ಕೆಲಸ ನಿರ್ವಹಿಸಿ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಬೇಕು. ಮಕ್ಕಳ ಕಲ್ಯಾಣ ಸಮಿತಿ ಮಕ್ಕಳ ಸಂಕಷ್ಟ ಪರಿಸ್ಥಿತಿಗೆ ಕಾರಣವಾದ ಅಂಶಗಳ ಬಗ್ಗೆ ಸಮಗ್ರ ಪರಿಶೀಲನೆ ನಡಿಸಿ ಮುಂದಿನ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಇತ್ತೀಚಿನ ದಿಗಳಲ್ಲಿ ಬಾಲ್ಯ ವಿವಾಹ ಹಾಗೂ ಪೋಕ್ಸೊ ಪ್ರಕರಣಗಳು ಹೆಚ್ಚಾಗಿವೆ. ಆದ್ದರಿಂದ ಮಕ್ಕಳಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು, ಪೋಕ್ಸೊ ಕಾಯ್ದೆ ಕುರಿತು ಮಾಹಿತಿ ನಿಡಬೇಕು. ಮಕ್ಕಳ ಮನಸ್ಸಿನಲ್ಲಿ ಯಾವುದೇ ಗೊಂದಲ ಇರದಂತೆ ನೋಡಿಕೊಳ್ಳಬೇಕು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಬಡತನ ನಿರ್ಮೂಲನೆ ಕುರಿತು ವಿವಿಧ ಇಲಾಖೆ ಇರುವ ಯೋಜನೆಗಳ ಕುರಿತು ಸದರಿ ಮಾಹಿತಿ ತಿಳಿದುಕೊಂಡು ಹೆಚ್ಚು ಪ್ರಚಾರ ಪಡಿಸಬೇಕು’ ಎಂದೂ ಅವರು ಹೇಳಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ.ಪರ್ವಿನ್ ಮಾತನಾಡಿ, ‘ರಕ್ಷಣೆ ಮತ್ತು ಆರೈಕೆ ಅವಶ್ಯಕತೆ ಇರುವ ಮಕ್ಕಳಿಗಾಗಿ ತುರ್ತು ಸೇವೆ ಒದಗಿಸುವ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಮಕ್ಕಳ ಉಚಿತ ಸಹಾಯವಾಣಿ ಸಂಖ್ಯೆ 1098 ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಿದೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಡಿಯಲ್ಲಿ ಮಕ್ಕಳ ಸಹಾಯವಾಣಿ 1098 / 112 ಸಂಕಷ್ಟದಲ್ಲಿರುವ ಮಕ್ಕಳ ರಕ್ಷಣೆ ಮತ್ತು ಪೋಷಣೆಗಾಗಿ ಕೆಲಸ ನಿರ್ವಹಿಸುತ್ತಿದೆ’ ಎಂದರು.

ಮಹಿಳಾ ಮತ್ತು ಮಕ್ಕಳ ಆಭಿವೃದ್ಧಿ ಇಲಾಖೆ ಉಪನೀರ್ದೆಶಕ ಎಂ.ಎನ್. ಚೇತನಕುಮಾರ, ಡಿಡಿಪಿಐ ಲೀಲಾವತಿ ಎಸ್ ಹೀರೆಮಠ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿದೇರ್ಶಕ ರಾಮನಗೌಡ ಕನ್ನೊಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ಅಪ್ಪಣ್ಣ ಹೆಗಡೆ, ನಗರ ಮಕ್ಕಳ ಕಲ್ಯಾಣಧಿಕಾರಿ ಎಸ್.ಆರ್. ಕಟ್ಟಿಮನಿ, ಬಿಇಒ ರವಿ ಭಜಂತ್ರಿ, ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮಮೂರ್ತಿ ಕೆ.ವಿ, ಕಾರ್ಮಿಕ ಇಲಾಖೆಯ ಅಧಿಕಾರಿ ಜೋಗುರ ಇತರರು ಇದ್ದರು.

ಜಿಲ್ಲೆಯಲ್ಲಿ 11 ಮಕ್ಕಳನ್ನು ರಕ್ಷಿಸಲಾಗಿದ್ದು ಇದರಲ್ಲಿ ಇಬ್ಬರು ಹೆಣ್ಣು ಮಕ್ಕಳು 9 ಜನ ಗಂಡು ಮಕ್ಕಳಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿ ಮೂಲಕ ಅಭಿರಕ್ಷಣೆ ನೀಡಲಾಗಿದೆ
ಡಾ.ಪರ್ವಿನ್ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ

ನಗರದಲ್ಲಿ ಬೇರೆ ರಾಜ್ಯಗಳ ತಾಯಂದಿರು ತಮ್ಮ ಮಕ್ಕಳೂಂದಿಗೆ ಭಿಕ್ಷೆ ಬೇಡುವುದು ಕಂಡುಬರುತ್ತಿದೆ. ಇಂತ ಸಂದರ್ಭದಲ್ಲಿ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬೇಕು
ಎಂ.ಎನ್. ಚೇತನಕುಮಾರ ಉಪನೀರ್ದೆಶಕ ಮಹಿಳಾ ಮತ್ತು ಮಕ್ಕಳ ಆಭಿವೃದ್ಧಿ ಇಲಾಖೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.