ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಕ್ಕಳ ರಕ್ಷಣೆ ಎಲ್ಲರ ಹೊಣೆ’

Last Updated 18 ನವೆಂಬರ್ 2020, 13:42 IST
ಅಕ್ಷರ ಗಾತ್ರ

ಬೆಳಗಾವಿ: ‘ಮಕ್ಕಳ ರಕ್ಷಣೆ ಮತ್ತು ಪೋಷಣೆ ಸಮಾಜದ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಒಗ್ಗಟಾಗಿ ಕೆಲಸ ಮಾಡುವುದು ಅವಶ್ಯವಾಗಿದೆ’ ಎಂದು ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿ.ಎಂ. ಜೋಶಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ-1098 ಮತ್ತು ವಿವಿಧ ಸ್ವಯಂಸೇವಾ ಸಂಸ್ಥೆಗಳ ಆಶ್ರಯದಲ್ಲಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಬುಧವಾರ ‘ಮಕ್ಕಳ ಮಾಸಾಚರಣೆ ಬೃಹತ್ ಆಂದೋಲನ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕೋವಿಡ್–19 ಸಾಂಕ್ರಾಮಿಕದ ಸಂದರ್ಭದಲ್ಲಿ ಮಕ್ಕಳ ರಕ್ಷಣೆ ಪೋಷಣೆಗೆ ಸಂಬಂಧಿಸಿದಂತೆ ಎಲ್ಲ ಇಲಾಖೆಗಳು ಉತ್ತಮ ಕರ್ತವ್ಯ ನಿರ್ವಹಣೆ ಮಾಡಿವೆ. ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು.

‘ಯಾವುದೇ ರೀತಿಯ ಆಪತ್ತು ಅಥವಾ ಮಕ್ಕಳಿಗೆ ತೊಂದರೆ ಎದುರಾದಾಗ ಸಹಾಯವಾಣಿ 1098ಗೆ ಕರೆ ಮಾಡಬೇಕು’ ಎಂದರು.

ಇದೇ ವೇಳೆ ಭಿಕ್ಷಾಟನೆ ತಡೆಗಟ್ಟುವಿಕೆಗೆ ಸಂಬಂದಿಸಿದ ಧ್ವನಿಮುದ್ರಿಕೆಯನ್ನು ಡಿಸಿಪಿ ಚಂದ್ರಶೇಖರ ನೀಲಗಾರ ಬಿಡುಗಡೆ ಮಾಡಿದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಗೌರವ ಕಾರ್ಯದರ್ಶಿ ವಿಜಯ ದೇವರಾಜ ಅರಸ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರವೀಂದ್ರ ರತ್ನಾಕರ, ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT