ಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಇಲ್ಲಿನ ಪೋಕ್ಸೊ ನ್ಯಾಯಾಲಯವು 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

ತಾಲ್ಲೂಕಿನ ಬಿ.ಕೆ.ಕಗ್ರಾಳಿಯ ರುತೇಶ ಅನಿಲ ಬೋಸಲೆ (22) ಶಿಕ್ಷೆಗೆ ಒಳಗಾದವ. 2025ರ ಏಪ್ರಿಲ್ 10ರಂದು ಬಾಲಕಿಗೆ ಲಡ್ಡು ಕೋಡುತ್ತೆನೆ ಬಾ ಎಂದು ಪುಸಲಾಯಿಸಿ ಮನೆಗೆ ಕರೆದುಕೊಂಡು, ಹಗ್ಗದಿಂದ ಕಟ್ಟಿಹಾಕಿ ಹೋಗಿ ಅತ್ಯಾಚಾರ ಎಸಗಿದ್ದ. ಅಲ್ಲದೇ ಈ ವಿಷಯ ಯಾರಿಗಾದರೂ ಹೇಳಿದರೆ ಕೊಲೆ ಮಾಡುತ್ತೇನೆ, ನಿನ್ನಂತೆಯೇ ನಿನ್ನ ಅಕ್ಕನಿಗೇ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ.

ಎರಡನೇ ಬಾರಿ ಬಾಲಕಿಯನ್ನು ಕರೆದಾಗ ಅವಳು ಹೋಗಲಿಲ್ಲ. ಅವಳ ಕೂದಲು ಹಿಡಿದುಕೊಂಡು ಎಳೆದುಕೊಂಡು ಹೋಗಿ ಇಟ್ಟಿಗೆಯಿಂದ ಹೊಡೆದಿದ್ದ.

ತನಿಖಾಧಿಕಾರಿ ಸುರೇಶ ಪಿ. ಶಿಂಗಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅವರು ಶಿಕ್ಷೆ ಪ್ರಕಟಿಸಿದ್ದಾರೆ.

ಜಿಲ್ಲಾ ಕಾನೂನು ಪ್ರಾಧಿಕಾರದಿಂದ ನೊಂದ ಬಾಲಕಿಗೆ ₹6 ಲಕ್ಷ ಪರಿಹಾರ ಘೋಷಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ ಪಾಟೀಲ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.