ಗುರುವಾರ , ಜುಲೈ 29, 2021
21 °C

‘ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಚಿಕಿತ್ಸೆ ಕೊಡಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಡಬಿ (ಬೆಳಗಾವಿ ಜಿಲ್ಲೆ): ‘ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಚಿಕಿತ್ಸೆ ಕೊಡಿಸುವುದು ಅತ್ಯವಶ್ಯವಾಗಿದೆ’ ಎಂದು ಡಾ.ಗೀತಾ ಸೋಡಿ ಹೇಳಿದರು.

ಇಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮತ್ತು ರಾಷ್ಟ್ರೀಯ ಬಾಲ ಸ್ವಾಸ್ತ್ಯ ಕಾರ್ಯಕ್ರಮದಲ್ಲಿ 6 ವರ್ಷದ ಒಳಗಿನ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಕೋವಿಡ್ ಮೊದಲಾದ ಸಾಂಕ್ರಾಮಿಕ ರೋಗಗಳ ಅಪಾಯದಿಂದ ಮಕ್ಕಳನ್ನು ರಕ್ಷಿಸಬೇಕಾದರೆ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಇರಬೇಕಾಗುತ್ತದೆ. ಇದು ಪೌಷ್ಟಿಕತೆಯಿಂದ ಬರುತ್ತದೆ. ಹೀಗಾಗಿ, ಅವರಿಗೆ ಪೌಷ್ಟಿಕ ಆಹಾರ ನೀಡಬೇಕು. ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು’ ಎಂದು ಸಲಹೆ ನೀಡಿದರು.

‘ಕೋವಿಡ್ 3ನೇ ಅಲೆ ಹಿನ್ನೆಲೆಯಲ್ಲಿ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಆರೋಗ್ಯ ತಪಾಸಣೆಗೆ ಹೆಚ್ಚಿನ ಆದ್ಯತೆ ಕೊಡಬೇಕು’ ಎಂದು ಪಿಡಿಒ ಸುವರ್ಣಗೌರಿ ಕೊಣ್ಣೂರ ಹೇಳಿದರು.

ಡಾ.ಮೋಸಿನ್ ಸೌದಾಗರ, ಡಾ.ಕಾಜಪ್ಪ ಹೊಸಮನಿ, ಸಂಜೀವ ಪರಪ್ಪನವರ, ಸುಕದೇವಿ ಹೆಬ್ಬಳ್ಳಿ, ಸುಶೀಲಮ್ಮ, ಎಸ್.ಎಂ. ಕುರಬೇಟ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು