ಮಂಗಳವಾರ, ಫೆಬ್ರವರಿ 25, 2020
19 °C

ವಿಜ್ಞಾನ ಹಬ್ಬದಲ್ಲಿ ಮಕ್ಕಳ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಂಬ್ರಾ: ಬೆಳಗಾವಿ ತಾಲ್ಲೂಕಿನ ಮುಚ್ಚಂಡಿ ಗ್ರಾಮದ ಕನ್ನಡ ಮತ್ತು ಮರಾಠಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಮುಚ್ಚಂಡಿ ಕ್ಲಸ್ಟರ್ ಮಟ್ಟದ ಮಕ್ಕಳ ವಿಜ್ಞಾನ ಹಬ್ಬ’ ಬುಧವಾರ ಸಂಭ್ರಮದಿಂದ ನಡೆಯಿತು.

ವಿವಿಧ ವೇಷಭೂಷಣ ಧರಿಸಿದ್ದ ಮಕ್ಕಳು ಮತ್ತು ಅಲಂಕಾರಿಕ ಚಕ್ಕಡಿ, ಟ್ರ್ಯಾಕ್ಟರ್‌ಗಳ ಮೆರವಣಿಗೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಪಿ. ಜುಟ್ಟನವರ ಚಾಲನೆ ನೀಡಿದರು. ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.

ನಂತರ ಕಾರ್ಯಕ್ರಮವು ಗ್ರಾಮ ಪಂಚಾಯ್ತಿ ಅಧ್ಯಕ್ಷ ಅಶೋಕ ಮೋದಗೇಕರ ಅಧ್ಯಕ್ಷತೆಯಲ್ಲಿ ನಡೆಯಿತು.

ಕ್ಷೇತ್ರ ಸಮನ್ವಯ ಅಧಿಕಾರಿ ಎಂ.ಎಸ್.ಮೇದಾರ ಮಾತನಾಡಿ, ‘ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಗುರುತಿಸಿ ಅವಕಾಶ ಒದಗಿಸಲು ಮಕ್ಕಳ ಹಬ್ಬ ಒಂದು ಉತ್ತಮ ವೇದಿಕೆ’ ಎಂದರು.

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಆರ್.ಸಿ.ಮುದಕನಗೌಡರ ಮತ್ತು ಸರ್ಕಾರಿ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ  ಜಯಕುಮಾರ ಹೆಬಳಿ ಮಾತನಾಡಿದರು.

ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳು ನಡೆದವು.

ಜಿಲ್ಲಾ ಪಂಚಾಯ್ತಿ ಸದಸ್ಯೆ ಮಲ್ಲವ್ವ ಬುಡ್ರಿ, ತಾಲ್ಲೂಕು ಪಂಚಾಯ್ತಿ ಸದಸ್ಯ ಸಿದ್ದಪ್ಪ ಮೊದಗೇಕರ, ಎಸ್‌ಡಿಎಂಸಿ ಅಧ್ಯಕ್ಷ ಅಶೋಕ ಗುತ್ತಿ, ಲಕ್ಷ್ಮಿ ವಣ್ಣೂರ, ಎಸ್.ಸಿ.ಬರಗಾಲಿ, ಗೀತಾ ಮಡಿವಾಳರ, ಬಿ.ಎಫ್‌.ಇಂಚಲ, ಸಂತೋಷ ಹುಲಕಾಯಿ, ಎಂ.ಎಸ್.ಶಿವಪೂಜಿಮಠ, ಆರ್.ಎ.ಮೋದಗೇಕರ ಇದ್ದರು.

ಸಿಆರ್‌ಪಿ ಆರ್‌.ಐ.ಮೇಟ್ಯಾಲಮಠ ಸ್ವಾಗತಿಸಿದರು. ಎಂ.ಎನ್.ರೊಟ್ಟಿ ನಿರೂಪಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು