ಬುಧವಾರ, ಫೆಬ್ರವರಿ 26, 2020
19 °C

ಅಂಗನವಾಡಿ ಕೇಂದ್ರದಲ್ಲಿ ಮೈಮೇಲೆ ಚೆಲ್ಲಿದ ಬಿಸಿ ಸಾರು: ಮಕ್ಕಳಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಖಾನಾಪುರ: ತಾಲ್ಲೂಕಿನ ಜಾಂಬೋಟಿ ಹೋಬಳಿಯ ಗೋಲ್ಯಾಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಬುಧವಾರ ಮಧ್ಯಾಹ್ನ ಬಿಸಿ ಸಾರು ಮೈಮೇಲೆ ಬಿದ್ದ ಪರಿಣಾಮ ಮೂವರು ಮಕ್ಕಳು ಮತ್ತು ಸಹಾಯಕಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಂಜನಾ, ಸಮೀಕ್ಷಾ ಮತ್ತು ಸಾನ್ವಿ ಹಾಗೂ ಸಹಾಯಕಿ ಲೀಲಾವತಿ ಗೋರಲ್ ಗಾಯಗೊಂಡವರು. ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನಡೆಯುತ್ತಿದೆ.

ಲೀಲಾವತಿ ಸಾರು ತಯಾರಿಸುತ್ತಿದ್ದ ವೇಳೆ ಪ್ರಜ್ಞೆ ತಪ್ಪಿದಂತಾಗಿ ಹಿಡಿದಿದ್ದ ಪಾತ್ರೆಯನ್ನು ಕೈಬಿಟ್ಟಿದ್ದಾರೆ. ಬಿಸಿ ಸಾರು ಅವರ ಮೇಲೆ ಹಾಗೂ ಮಕ್ಕಳ ಮೇಲೆ ಚೆಲ್ಲಿ, ಸುಟ್ಟ ಗಾಯಗಳಾಗಿವೆ.

ಅಂಗನವಾಡಿ ಕಾರ್ಯಕರ್ತೆ ಮತ್ತು ಸ್ಥಳೀಯರು ತಕ್ಷಣ ಕೊಠಡಿಯಲ್ಲಿದ್ದ ಮಕ್ಕಳನ್ನು ಹೊರಗೆ ಸಾಗಿಸಿ, ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕೊಂಡೊಯ್ದರು.

‘ಈ ಬಗ್ಗೆ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ’ ಎಂದು ಖಾನಾಪುರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪರ್ವೀನ್‌ ಶೇಖ್ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು