ಶನಿವಾರ, ಜುಲೈ 24, 2021
23 °C

ಜೂನ್‌ 30ರ ನಂತರವೇ ತೆರೆಯಲಿವೆ ಚರ್ಚ್‌ಗಳು: ಬಿಷಪ್‌ ಡೆರಿಕ್‌ ಫರ್ನಾಂಡೀಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಕೊರೊನಾ ಮುಂಜಾಗ್ರತೆಯ ಹಿನ್ನೆಲೆಯಲ್ಲಿ ಬೆಳಗಾವಿ ಹಾಗೂ ಕಾರವಾರ ಧರ್ಮಪ್ರಾಂತಕ್ಕೆ ಒಳಪಡುವ ಚರ್ಚ್‌ಗಳನ್ನು ಜೂನ್‌ 30ರ ನಂತರವೇ ತೆರೆಯಲಾಗುವುದು’ ಎಂದು ಬಿಷಪ್‌ ಡೆರಿಕ್‌ ಫರ್ನಾಂಡೀಸ್‌ ಹೇಳಿದರು.

‘ಚರ್ಚ್‌ ಸೇರಿದಂತೆ ಎಲ್ಲ ಧರ್ಮದ ಪ್ರಾರ್ಥನಾ ಮಂದಿರಗಳನ್ನು ಜೂನ್‌ 13ರಿಂದ ತೆರೆಯಲು ಸರ್ಕಾರ ಅನುಮತಿ ನೀಡಿತ್ತು. ಇದರ ಹಿನ್ನೆಲೆಯಲ್ಲಿ ಚರ್ಚ್‌ನಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆಯೇ ಎಂದು ಹಲವರು ಕೇಳಿದ್ದರು. ಅದಕ್ಕಾಗಿ ವಿವರಣೆ ನೀಡುತ್ತಿದ್ದೇನೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ ಹಾಗೂ ನೆರೆಯ ಮಹಾರಾಷ್ಟ್ರದ ಚಂದಗಡ ತಾಲ್ಲೂಕಿನ ಚರ್ಚ್‌ಗಳು ಬೆಳಗಾವಿ ಧರ್ಮಪ್ರಾಂತ ವ್ಯಾಪ್ತಿಯೊಳಗೆ ಕಾರ್ಯನಿರ್ವಹಿಸುತ್ತಿವೆ.

‘ಜನರ ಆರೋಗ್ಯ ಹಾಗೂ ಸುರಕ್ಷತೆಗೆ ಚರ್ಚ್‌ ಯಾವಾಗಲೂ ಆದ್ಯತೆ ನೀಡಿದೆ. ಇದೇ ಹಿನ್ನೆಲೆಯಲ್ಲಿ ಚರ್ಚ್‌ಗಳನ್ನು ತೆರೆಯುವುದನ್ನು ಮುಂದೂಡಲಾಗಿದೆ. ಜೂನ್‌ 30ರ ನಂತರ ಪರಿಸ್ಥಿತಿ ಅವಲೋಕಿಸಿ, ಚರ್ಚ್‌ಗಳನ್ನು ತೆರೆಯಲಾಗುವುದು’ ಎಂದು ಅವರು ವಿವರಣೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು