ಸಂಗೊಳ್ಳಿ ರಾಯಣ್ಣ ಸೊಸೈಟಿ ಹಗರಣ: ಸಿಐಡಿ ಅಧಿಕಾರಿಗಳಿಂದ ತನಿಖೆ ಆರಂಭ

7

ಸಂಗೊಳ್ಳಿ ರಾಯಣ್ಣ ಸೊಸೈಟಿ ಹಗರಣ: ಸಿಐಡಿ ಅಧಿಕಾರಿಗಳಿಂದ ತನಿಖೆ ಆರಂಭ

Published:
Updated:

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಸಹಕಾರ ಕ್ರೆಡಿಟ್‌ ಸೊಸೈಟಿಯ ಬಹುಕೋಟಿ ಹಗರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಆರಂಭಿಸಿದ್ದಾರೆ. ಕಳೆದ 3– 4 ದಿನಗಳಿಂದ ನಗರದಲ್ಲಿ ಬೀಡು ಬಿಟ್ಟಿರುವ ಅಧಿಕಾರಿಗಳು, ಸೊಸೈಟಿಯ ದಾಖಲೆ ಪತ್ರಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಜಿಲ್ಲೆಯ ವಿವಿಧೆಡೆ ಇರುವ ಸೊಸೈಟಿಯ ವಿವಿಧ ಶಾಖೆಗಳ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಮುಂದಿನ ವಾರ ಬೆಂಗಳೂರಿನಲ್ಲಿ ವಿಚಾರಣೆಗೆ ಹಾಜರಾಗಬೇಕೆಂದು ಆನಂದ ಅಪ್ಪುಗೋಳ ಅವರಿಗೆ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಠೇವಣಿದಾರರ ಸುಮಾರು ₹ 230 ಕೋಟಿ ಹಣ ವಾಪಸ್‌ ನೀಡದ ಆರೋಪವನ್ನು ಸೊಸೈಟಿ ಅಧ್ಯಕ್ಷ, ಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ ಎದುರಿಸುತ್ತಿದ್ದಾರೆ. ಇದರ ವಿರುದ್ಧ ಠೇವಣಿದಾರರು ನ್ಯಾಯಾಲಯದ ಮೊರೆ ಹೋಗಿದ್ದರು. ಹಣ ದುರುಪಯೋಗ ಹಾಗೂ ವಂಚನೆ ಪ್ರಕರಣದಡಿ ಆನಂದ ಅವರನ್ನು ಪೊಲೀಸರು ಬಂಧಿಸಿದ್ದರು. ಜಾಮೀನಿನ ಮೇಲೆ ಹೊರಬಂದಿದ್ದಾರೆ. ಪ್ರಕರಣದ ತನಿಖೆಯನ್ನು ಸ್ಥಳೀಯ ಪೊಲೀಸರು ಇತ್ತೀಚೆಗೆ ಸಿಐಡಿಗೆ ಹಸ್ತಾಂತರಿಸಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !