ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ರಮೇಶ ಜಾರಕಿಹೊಳಿ ಕಾರ್ಖಾನೆ ವಿರುದ್ಧ ಸಿಐಡಿ ತನಿಖೆ

Published 6 ಫೆಬ್ರುವರಿ 2024, 16:31 IST
Last Updated 6 ಫೆಬ್ರುವರಿ 2024, 16:31 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ಗೋಕಾಕ ತಾಲ್ಲೂಕಿನ ಹಿರೇನಂದಿ ಬಳಿ ಇರುವ, ಶಾಸಕ ರಮೇಶ ಜಾರಕಿಹೊಳಿ ಸ್ಥಾಪಿಸಿದ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ ಮೇಲೆ ಮಂಗಳವಾರ ಸಿಐಡಿ ಅಧಿಕಾರಿಗಳ ತಂಡ ದಾಳಿ ಮಾಡಿ ತನಿಖೆ ನಡೆಸಿತು.

ಸೌಭಾಗ್ಯಲಕ್ಷ್ಮಿ ಶುಗರ್ಸ್‌ನವರು ಅಪೆಕ್ಸ್ ಬ್ಯಾಂಕಿನಿಂದ ₹439 ಕೋಟಿ ಸಾಲ ಪಡೆದು ಮರುಪಾವತಿ ಮಾಡದ ಕುರಿತು ಬ್ಯಾಂಕ್‌ ವ್ಯವಸ್ಥಾಪಕ ರಾಜಣ್ಣ ಮುತ್ತಶೆಟ್ಟಿ ಅವರು ಜನವರಿ 5ರಂದು ಬೆಂಗಳೂರಿನಲ್ಲಿ ದೂರು ದಾಖಲಿಸಿದ್ದರು. ಕಲಂ 406, 420ರ ಅಡಿಯಲ್ಲಿ ದೂರು ದಾಖಲಿಸಲಾಗಿತ್ತು. ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿದೆ.

ಮಂಗಳವಾರ ಬೆಂಗಳೂರಿನಿಂದ ಮೂರು ವಾಹನಗಳಲ್ಲಿ ಬಂದ ಅಧಿಕಾರಿಗಳು, ಕಾರ್ಖಾನೆಯಲ್ಲಿ ಸಂಜೆಯವರೆಗೆ ತನಿಖೆ ನಡೆಸಿದರು. ಸದ್ಯ ಈ ಕಾರ್ಖಾನೆಯನ್ನು ರಮೇಶ ಜಾರಕಿಹೊಳಿ ಅವರ ಪುತ್ರ ಸಂತೋಷ ನಿರ್ವಹಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT