ಭಾನುವಾರ, ಸೆಪ್ಟೆಂಬರ್ 15, 2019
26 °C

‘ಲಕ್ಷ್ಯ’ ಉತ್ಸವದಲ್ಲಿ ಶರಣ್‌ ಭಾಗಿ

Published:
Updated:
Prajavani

ಬೆಳಗಾವಿ: ಇಲ್ಲಿನ ಜಕ್ಕೇರಿಹೊಂಡದ ನಾಯ್ಕರ್‌ ಶಿಕ್ಷಣ ಸಂಸ್ಥೆಯ ಆರ್‌ಟಿ ಪಿಯು ಕಾಲೇಜಿನಲ್ಲಿ ಸೆ. 7ರಂದು ಸಂಜೆ 5.30ಕ್ಕೆ ಆಯೋಜಿಸಿರುವ ‘ಲಕ್ಷ್ಯ–2019’ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಚಲನಚಿತ್ರ ನಟ ಶರಣ್‌ ಮುಖ್ಯಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ಕಾಲೇಜಿನ ಪ್ರಾಂಶುಪಾಲ ಡಾ.ಸಿ.ಎನ್. ನಾಯ್ಕರ ಅಧ್ಯಕ್ಷತೆ ವಹಿಸುವರು. ಮುಖಂಡ ಶ್ಯಾಮ ಘಾಟಗೆ, ನಾಯ್ಕರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಶ್ವೇತಾ ಸಿ. ನಾಯ್ಕರ್ ಭಾಗವಹಿಸುವರು.

ಉತ್ಸವದಲ್ಲಿ 10ನೇ ತರಗತಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ರಸಪ್ರಶ್ನೆ, ಚರ್ಚಾ ಸ್ಪರ್ಧೆ, ನೃತ್ಯ, ವಿಜ್ಞಾನ ಮಾದರಿ ತಯಾರಿಕೆ, ಪೌರಾಣಿಕ ನಾಟಕ ಮೊದಲಾದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Post Comments (+)