ಮಂಗಳವಾರ, ಸೆಪ್ಟೆಂಬರ್ 28, 2021
25 °C

ಟಿಳಕವಾಡಿ: ಬ್ಯಾರಿಕೇಡ್‌ ತೆರವಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ನಗರದ ಟಿಳಕವಾಡಿ ಮೊದಲ ರೈಲ್ವೆ ಗೇಟ್ ಬಳಿ ಅಳವಡಿಸಿರುವ ಬ್ಯಾರಿಕೇಡ್ ತೆರವುಗೊಳಿಸುವಂತೆ ಆಗ್ರಹಿಸಿ ಸ್ಥಳೀಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಅಲ್ಲಿನ ಚಿತ್ರಣದ 100 ಫೋಟೊಗಳನ್ನು ಒಳಗೊಂಡಿರುವ ದೊಡ್ಡದಾದ ಮನವಿ ಪತ್ರವನ್ನು ಅವರು ಸಲ್ಲಿಸಿದ್ದು ಗಮನಸೆಳೆಯಿತು.

‘ಅಲ್ಲಿ 2014ರ ಜೂನ್ 19ರಿಂದಲೂ ಸಂಚಾರ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ. ಇದರಿಂದ ಸುಗಮ ಸಂಚಾರಕ್ಕೆ ತೊಂದರೆ ಆಗುತ್ತಿದೆ. ವಾಹನದಟ್ಟಣೆಯೂ ಉಂಟಾಗುತ್ತಿದೆ. ಈ ರಸ್ತೆಯಲ್ಲಿ ನಿತ್ಯ ಲಕ್ಷಕ್ಕೂ ಹೆಚ್ಚು ಜನರು ಸಂಚರಿಸುತ್ತಾರೆ. ಹೀಗಾಗಿ ಬ್ಯಾರಿಕೇಡ್ ತೆರವುಗೊಳಿಸಿ, ಜನರಿಗೆ ಅನುಕೂಲ ಮಾಡಿಕೊಡಬೇಕು. ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಮೇಲ್ಸೇತುವೆ ನಿರ್ಮಿಸಬೇಕು’ ಎಂದು ಹೋರಾಟಗಾರ ಸುಭಾಷ ಘೋಲಪ ತಿಳಿಸಿದರು.

‘ಬ್ಯಾರಿಕೇಡ್ ಹಾಕಿರುವುದರಿಂದಾಗಿ ಮಂಗಳವಾರ ಪೇಟೆ, ಸೋಮವಾರ ಪೇಟೆ, ಗುರುವಾರ ಪೇಟೆ, ಬುಧವಾರ ಪೇಟೆ, ರಾಯ್ ರಸ್ತೆ, ಮಂಡೋಳಿ ಮುಂತಾದ ಪ್ರದೇಶಗಳ ಜನರು ತೀವ್ರ ಸಮಸ್ಯೆ ಅನುಭವಿಸುತ್ತಿದ್ದಾರೆ. ಹೀಗಾಗಿ ಈ ಅನಧಿಕೃತ ಬ್ಯಾರಿಕೇಡ್ ತೆರವುಗೊಳಿಸಿ, ಅಗತ್ಯ ಬಿದ್ದರೆ ಸಂಚಾರ ಪೊಲೀಸರನ್ನು ನಿಯೋಜಿಸಬೇಕು. ಜನರು ಸುತ್ತಿಬಳಸಿ ಸಂಚರಿಸುವುದನ್ನು ತಪ್ಪಿಸಬೇಕು’ ಎಂದು ಕೋರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.