ಬೆಳಗಾವಿ: ಇಲ್ಲಿನ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ 11ನೇ ತಂಡದ ನಾಗರಿಕ ಪೊಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಬುಧವಾರ ನಡೆಯಿತು.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಕಾರ್ಯಕ್ರಮ ನಡೆಯಿತು. ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದ ಪ್ರಶಿಕ್ಷಣಾರ್ಥಿಗಳು ಪಥಸಂಚಲನವನ್ನು ಆಕರ್ಷಕವಾಗಿ ಪ್ರಸ್ತುತಪಡಿಸಿದರು. ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಮುಖ್ಯಅತಿಥಿಯಾಗಿ ಪಾಲ್ಗೊಂಡು ಗೌರವ ವಂದನೆ ಸ್ವೀಕರಿಸಿದ ಉತ್ತರ ವಲಯ ಐಜಿಪಿ ಎನ್. ಸತೀಶ್ ಕುಮಾರ್, ‘ಕಾನ್‌ಸ್ಟೆಬಲ್‌ಗಳು ಇಡೀ ಪೊಲೀಸ್ ವ್ಯವಸ್ಥೆಯ ಬೆನ್ನೆಲುಬಿದ್ದಂತೆ. ಅವರ ಕಾರ್ಯ ಮಹತ್ವದ್ದಾಗಿದೆ. ವೃತ್ತಿ ಗೌರವ ಎತ್ತಿ ಹಿಡಿಯುವ ಜೊತೆಗೆ, ಇಲಾಖೆಯ ಹೆಸರನ್ನು ಉಳಿಸಬೇಕು’ ಎಂದು ತಿಳಿಸಿದರು.

ಎಸ್ಪಿ ಲಕ್ಷ್ಮಣ ನಿಂಬರಗಿ, ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಯ, ಹೆಚ್ಚುವರಿ ಎಸ್ಪಿ ಮಹಾನಿಂಗ ನಂದಗಾವಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.