ಬೆಳಗಾವಿ: ತಮ್ಮ 11 ತಿಂಗಳ ವೇತನ ಪಾವತಿಸಬೇಕು ಎಂದು ಆಗ್ರಹಿಸಿ 138 ಗುತ್ತಿಗೆ ಪೌರ ಕಾರ್ಮಿಕರು, ಮಹಾನಗರದ ಪಾಲಿಕೆ ಆವರಣದಲ್ಲಿ ಗುರುವಾರದಿಂದ ಅಹೋರಾತ್ರಿ ಧರಣಿ ಆರಂಭಿಸಿದರು.
‘ಎಲ್ಲ 138 ಪೌರಕಾರ್ಮಿಕರಿಗೂ ಸಂಬಳ ತಡೆಹಿಡಿಯಲಾಗಿದೆ. ನಿರಂತರವಾಗಿ ಎಲ್ಲರೂ ಕೆಲಸ ಮಾಡಿದ್ದೇವೆ. ಆದರೂ ಸಂಬಂಧಿಸಿದವರು ಸಂಬಳ ನೀಡುತ್ತಿಲ್ಲ. ಈ ಬಗ್ಗೆ ಪಾಲಿಕೆ ಅಧಿಕಾರಿಗಳನ್ನು ವಿಚಾರಿಸಿದರೆ ‘ನೀವು ಅಧಿಕೃತ ಕಾರ್ಮಿಕರಲ್ಲ. ಸಂಬಳ ನಿಮ್ಮ ಗುತ್ತಿಗೆದಾರರಿಗೆ ಸಂಬಂಧಿಸಿದ ವಿಷಯ’ ಎಂದು ಹೇಳುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
‘ಸಂಬಳ ನೀಡದ ಕಾರಣ ನಮ್ಮ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಮಕ್ಕಳ ಶಿಕ್ಷಣ ನಿಂತಿದೆ. ಸಂಬಂಧಿಸಿದ ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಿ ಸಂಬಳ ಕೊಡಿಸಬೇಕು’ ಎಂದೂ ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.