ಮುಗಳಖೋಡ: ‘ಸದೃಢ ಶರೀರದಲ್ಲಿ ಸದೃಢ ಮನಸ್ಸು ಇರುತ್ತದೆ. ಹೀಗಾಗಿ ನಮ್ಮ ಆರೋಗ್ಯದ ದೃಷ್ಟಿಯಿಂದ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು’ ಎಂದು ಮುಖಂಡ ಡಾ.ಸಿ.ಬಿ. ಕುಲಿಗೋಡ ಹೇಳಿದರು.

ಪಟ್ಟಣದ ಚವಿವ ಸಂಘದ ಬ.ನೀ. ಕುಲಿಗೋಡ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದಿಂದ ಹಮ್ಮಿಕೊಂಡಿದ್ದ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಸ್ವಚ್ಛತೆ ಕಾರ್ಯದಲ್ಲಿ ತೊಡಗಿಕೊಳ್ಳಬೇಕು’ ಎಂದರು.

ಪ್ರಾಚಾರ್ಯ ಎಂ.ಕೆ. ಬೀಳಗಿ, ‘ಪ್ಲಾಸ್ಟಿಕ್ ಮುಕ್ತ ಭಾರತದ ಬಗ್ಗೆ ತಿಳಿವಳಿಕೆ ನೀಡುವುದು ನಮ್ಮ ಕರ್ತವ್ಯವಾಗಿದೆ’ ಎಂದು ತಿಳಿಸಿದರು.

ಪುರಸಭೆ ಆವರಣ, ಗಣಪತಿ ಮಂದಿರ ಆವರಣ ಹಾಗೂ ಪಟ್ಟಣದ ವಿವಿಧ ಬೀದಿಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.

ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಜೆ.ಆರ್. ಮೊಗವೀರ, ಉಪನ್ಯಾಸಕರಾದ ಕೆ.ಎ. ಕಾಂಬಳೆ, ಬಿ.ಎ. ಹಿಪ್ಪರಗಿ, ಎಂ.ಜಿ. ಬಾಳೋಜಿ, ಎಸ್.ಬಿ. ಕೊಕಟನೂರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.