ಬೆಳಗಾವಿ: ‘ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಪ್ರಸಕ್ತ ಸಾಲಿನ ಬಿ.ಇಡಿ ಹಾಗೂ ಬಿಪಿ.ಇಡಿ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಕ್ಲಸ್ಟರ್ ಮಾದರಿಯಲ್ಲಿ ನಡೆಸಲಾಗುತ್ತಿದೆ’ ಎಂದು ಮೌಲ್ಯಮಾಪನ ಕುಲಸಚಿವರು ತಿಳಿಸಿದ್ದಾರೆ.

‘ವಿಶ್ವವಿದ್ಯಾಲಯವು ಯಾವುದೇ ಪರೀಕ್ಷಾ ಕೇಂದ್ರಗಳನ್ನು ರದ್ದುಪಡಿಸಿಲ್ಲ. ಆದರೆ, ಪರೀಕ್ಷೆಗಳ ಪೂರ್ವಸಿದ್ಧತೆಗೆ ಕೆರದಿದ್ದ ಸಭೆಯಲ್ಲಿ, ಪರೀಕ್ಷಾ ಕೇಂದ್ರಗಳನ್ನು ಜೋಡಣೆ ಮಾಡಿ (ಕ್ಲಸ್ಟರ್ ಮಾದರಿಯಲ್ಲಿ) ಪರೀಕ್ಷೆಗಳನ್ನು ನಡೆಸಲು ಕೆಲವು ಕಾಲೇಜುಗಳ ಪ್ರಾಚಾರ್ಯರು ಸಲಹೆ ನೀಡಿದ್ದರು. ಅದರಂತೆ ತಾತ್ಕಾಲಿಕವಾಗಿ ಸಂಬಂಧಿಸಿದ ಜಿಲ್ಲೆ, ತಾಲ್ಲೂಕುಗಳಲ್ಲಿನ ಕಾಲೇಜುಗಳಲ್ಲಿ ಲಭ್ಯವಿರುವ ಅಗತ್ಯ ಸೌಲಭ್ಯಗಳ ಆಧಾರದ ಮೇಲೆ, ವಿದ್ಯಾರ್ಥಿಗಳಿಗೆ ಅನಾನುಕೂಲವಾಗದ ರೀತಿಯಲ್ಲಿ ಜೋಡಣೆ ಮಾಡಿ (ಕ್ಲಸ್ಟರ್ ಮಾದರಿಯಲ್ಲಿ) ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಅಥವಾ ಪೋಷಕರು ವದಂತಿಗಳಿಗೆ ಕಿವಿಕೊಡಬಾರದು’ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.