ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಕಾಕ: ₹3,333 ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ

Last Updated 28 ಮಾರ್ಚ್ 2023, 14:21 IST
ಅಕ್ಷರ ಗಾತ್ರ

ಗೋಕಾಕ: ಗೋಕಾಕ, ಅರಭಾವಿ ಹಾಗೂ ಅಥಣಿ ವಿಧಾನಸಭಾ ಕ್ಷೇತ್ರಗಳಲ್ಲಿ ಕೈಗೆತ್ತಿಕೊಂಡ ಒಟ್ಟು ₹ 3,333 ಕೋಟಿ ಅಂದಾಜು ವೆಚ್ಚದ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿದರು.

₹ 969.63 ಕೋಟಿ ವೆಚ್ಚದ ಘಟ್ಟಿ ಬಸವಣ್ಣ ಏತನೀರಾವರಿ ಯೋಜನೆ, ₹32 ಕೋಟಿ ವೆಚ್ಚದ ಗೋಕಾಕ ತಾಲ್ಲೂಕಿನ ಕೌಜಲಗಿ, ಗೋಸಬಾಳ ಹಾಗೂ ಸುತ್ತಮುತ್ತಲಿನ ಹಳ್ಳಿಗಳ 2190 ಹೆಕ್ಟೇರ್ ಜಮೀನುಗಳಿಗೆ ಹೊಲಗಾಲುವೆ ನಿರ್ಮಿಸುವ ಯೋಜನೆ, ₹ 685 ಕೋಟಿ ವೆಚ್ಚದಲ್ಲಿ ಗೋಕಾಕ ನಗರ ಹಾಗೂ ಲೋಳಸೂರು ಗ್ರಾಮವನ್ನು ಪ್ರವಾಹದಿಂದ ತಡೆಗಟ್ಟುವ ಸಲುವಾಗಿ ಘಟಪ್ರಭಾ ನದಿಗೆ ತಡೆಗೋಡೆ ನಿರ್ಮಿಸುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು.

ಇದೇ ವೇಳೆ ₹160.20 ಕೋಟಿ ವೆಚ್ಚದಲ್ಲಿ ಗೋಕಾಕ ತಾಲ್ಲೂಕಿನ ಕೌಜಲಗಿ, ಗೋಸಬಾಳ ಹಾಗೂ ಸುತ್ತಮುತ್ತಲಿನ ಹಳ್ಳಿಗಳ 2,300 ಹೆಕ್ಟೇರ್ ಜಮೀನುಗಳ ನೀರೊದಗಿಸುವ ಕಲ್ಮಡಿ ಏತ ನೀರಾವರಿ ಯೋಜನೆಯನ್ನು ಅವರು ಲೋಕಾರ್ಪಣೆ ಮಾಡಿದರು.

ಅಲ್ಲದೇ, ಅಥಣಿ ತಾಲ್ಲೂಕಿನ 13 ಕೆರೆಗಳನ್ನು ತುಂಬಿಸುವ, 9,950 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಹಾಗೂ ಸ್ಥಳೀಯ ಹಳ್ಳಿಗಳಿಗೆ ಸರಣಿ ಚೆಕ್ ಡ್ಯಾಂ ನಿರ್ಮಾಣ ಮಾಡುವ ₹1486.81 ಕೋಟಿ ವೆಚ್ಚದ ಅಮ್ಮಾಜೇಶ್ವರಿ (ಕೊಟ್ಟಲಗಿ) ಏತ ನೀರಾವರಿ ಯೋಜನೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ಕೊಟ್ಟರು.

ಸಚಿವ ಸಿ.ಸಿ.ಪಾಟೀಲ, ಶಾಸಕರಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ. ಮಹೇಶ ಕುಮಠಳ್ಳಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಹರ್ಷಲ್ ಭೊಯರ್, ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಸೇರಿದಂತೆ ಸ್ಥಳಿಯ ಮುಖಂಡರು ಇದ್ದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT