ಬೆಳಗಾವಿ: ಇಲ್ಲಿನ ಮಹಾನಗರಪಾಲಿಕೆಯ ಬಿಜೆಪಿಯ ಸದಸ್ಯರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಅಭಿನಂದಿಸಿದರು.

ಹಿಂದವಾಡಿಯ ಮಹಾವೀರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಚುನಾವಣೆಯಲ್ಲಿ ಪಕ್ಷವು ಬಹುಮತ ಪಡೆಯಲು ಶ್ರಮಿಸಿದ ಪದಾಧಿಕಾರಿಗಳನ್ನೂ ಸತ್ಕರಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಪಕ್ಷದ ನಗರ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ, ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಅವರನ್ನೂ ಸನ್ಮಾನಿಸಿದರು.

ಸಚಿವರಾದ ಬಿ.ಎ. ಬಸವರಾಜ, ಉಮೇಶ ಕತ್ತಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ಶಾಸಕ ಡಿ.ಎಂ. ಐಹೊಳೆ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ, ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಮೊದಲಾದವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.