ಸವದತ್ತಿಯ ಯಲ್ಲಮ್ಮ ದರ್ಶನ ಪಡೆದ ಸಿಎಂ ಬೊಮ್ಮಾಯಿ

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪತ್ನಿ ಚನ್ನಮ್ಮ ಅವರೊಂದಿಗೆ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ಗುಡ್ಡದಲ್ಲಿರುವ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಬುಧವಾರ ಸಂಜೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬೆಳಕಿನ ಹಬ್ಬ ದೀಪಾವಳಿಯು ಇಡೀ ಕನ್ನಡ ನಾಡಿಗೆ ಬೆಳಕು ತರಲೆಂದು ತಾಯಿ ಯಲ್ಲಮ್ಮದೇವಿಯಲ್ಲಿ ಪ್ರಾರ್ಥಿಸಿದ್ದೇನೆ’ ಎಂದು ತಿಳಿಸಿದರು.
ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.