ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19 ಮರಣ ಪ್ರಮಾಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ: ಮುಖ್ಯಮಂತ್ರಿ ಸೂಚನೆ

Last Updated 7 ಅಕ್ಟೋಬರ್ 2020, 8:19 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೋವಿಡ್ ಕುರಿತಂತೆ ನಗರದ ಪ್ರವಾಸಿಮಂದಿರದಲ್ಲಿ ಬುಧವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು.

ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ನಿಯಮ ಉಲ್ಲಂಘಿಸುವವರ ಮೇಲೆ ದಂಡ ವಿಧಿಸುವ ಮೂಲಕ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಅಂತರ ಪಾಲನೆಗೆ ಮೊದಲ ಆದ್ಯತೆ ನೀಡಬೇಕು ಎಂದು ನಿರ್ದೇಶನ ನೀಡಿದರು.

ಕೋವಿಡ್-19 ತಪಾಸಣೆಗೆ ಸಂಬಂಧಿಸಿದಂತೆ ಇರುವ ಅಡೆತಡೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ, ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರ ನೀಡಲಿರುವ ಹೊಸ ಮಾರ್ಗಸೂಚಿ ಆಧರಿಸಿ, ಇನ್ನಷ್ಟು ಚಟುವಟಿಕೆಗಳು ಆರಂಭಗೊಳ್ಳಲಿರುವುದರಿಂದ ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು, ಸದ್ಯಕ್ಕೆ ಸೋಂಕು ಹಾಗೂ ಮರಣ ಪ್ರಮಾಣದಲ್ಲಿ ಕ್ರಮೇಣ ಇಳಿಕೆ ಕಂಡುಬರುತ್ತಿದೆ ಎಂದರು. ಮಾರ್ಗಸೂಚಿಗಳ ಅನುಷ್ಠಾನಕ್ಕೆ ಇನ್ನಷ್ಟು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಬೆಳಗಾವಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಎಸ್ಪಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ. ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಿ.ಎನ್. ತುಕ್ಕಾರ, ಬಿಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ, ಉಪ ವಿಭಾಗಾಧಿಕಾರಿ ಅಶೋಕ ತೇಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT