ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗೋಕಾಕ: ಪ್ರವಾಹ‌ಪೀಡಿತ ಸ್ಥಳಗಳಿಗೆ ಸಿ.ಎಂ ಭೇಟಿ

ಸಂತ್ರಸ್ತರ ಅಹವಾಲು ಆಲಿಸಿದ ಸಿದ್ದರಾಮಯ್ಯ
Published : 5 ಆಗಸ್ಟ್ 2024, 10:45 IST
Last Updated : 5 ಆಗಸ್ಟ್ 2024, 10:45 IST
ಫಾಲೋ ಮಾಡಿ
Comments

ಬೆಳಗಾವಿ: ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಅತಿವೃಷ್ಟಿಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದರು.

ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು, ಹೊಸ ಸೇತುವೆ ನಿರ್ಮಾಣಕ್ಕೆ ಮನವಿ ಮಾಡಿದರು.

ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ವಿಧಾನಪರಿಷತ್ ಸದಸ್ಯರಾದ ಲಖನ್ ಜಾರಕಿಹೊಳಿ ಮತ್ತಿತರರು ಉಪಸ್ಥಿತರಿದ್ದರು.

ಬಳಿಕ ಲೋಳಸೂರ ಸೇತುವೆಯ ಬಳಿ ಹಿನ್ನೀರಿನಿಂದ ಒಂದು ವಾರದಿಂದ ಮುಳುಗಡೆಯಾಗಿದ್ದ ಗೋಕಾಕ‌ನಗರದ ಹಳೆ ದನಗಳ ಪೇಟೆ, ಮಟನ್ ಮಾರ್ಕೆಟ್, ಕುಂಬಾರಗಲ್ಲಿ, ಉಪ್ಪಾರಗಲ್ಲಿ, ಭೋಜಗಾರ ಗಲ್ಲಿ ಮತ್ತಿತರ‌ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು, ಮಳೆಯಿಂದ‌ ಉಂಟಾಗಿರುವ ಹಾನಿಯನ್ನು ವಿವರಿಸಿದರು.

ಸಂಕೇಶ್ವರ- ಯರಗಟ್ಟಿ ರಾಜ್ಯ ಹೆದ್ದಾರಿಯಲ್ಲಿರುವ ಲೋಳಸೂರ ಸೇತುವೆ ತುಂಬಾ ಹಳೆಯದಾಗಿದ್ದು, ಪ್ರತಿವರ್ಷ ಮಳೆಗಾಲದಲ್ಲಿ ಮುಳುಗಡೆಯಾಗುತ್ತಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಎತ್ತರದ ಲೋಳಸೂರ ಸೇತುವೆಯ ನಿರ್ಮಿಸುವ ಅಗತ್ಯವಿದೆ ಎಂದು‌ ಸಚಿವ ವಿವರಿಸಿದರು.

ಕಾಳಜಿ ಕೇಂದ್ರಕ್ಕೆ‌ ಭೇಟಿ:

ಮುಳಗಡೆಯಿಂದ ಸಂತ್ರಸ್ತ ಕುಟುಂಬಗಳಿಗೆ ವಸತಿ ಕಲ್ಪಿಸಲು ಗೋಕಾಕ‌ ನಗರದ ಸರ್ಕಾರಿ ಮುನ್ಸಿಪಲ್‌ ಕಾಲೇಜಿನಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಕ್ಕೆ‌ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಭೇಟಿ ನೀಡಿ, ಸಂತ್ರಸ್ತರ‌ ಜತೆ‌ ಚರ್ಚಿಸಿದರು.

ಸಂತ್ರಸ್ತರಿಗೆ ಊಟೋಪಾಹಾರ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT