ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಗೊಳ್ಳಿ ರಾಯಣ್ಣನ ಅದ್ಧೂರಿ ಉತ್ಸವಕ್ಕೆ ಮುಖ್ಯಮಂತ್ರಿ ಚಾಲನೆ: ಶಾಸಕ ಮಹಾಂತೇಶ

Published 13 ಜನವರಿ 2024, 15:47 IST
Last Updated 13 ಜನವರಿ 2024, 15:47 IST
ಅಕ್ಷರ ಗಾತ್ರ

ಬೈಲಹೊಂಗಲ: ತಾಲ್ಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಜ.17, 18ರಂದು ಬೆಳಗಾವಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂಂದ ಆಚರಿಸಲ್ಪಡುತ್ತಿರುವ ಸಂಗೊಳ್ಳಿ ಉತ್ಸವದ ಅಂಗವಾಗಿ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ರಾಕ್ ಗಾರ್ಡನ್, ಸೈನಿಕ ವಸತಿ ಶಾಲೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, 'ಸಂಗೊಳ್ಳಿ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲು ಮುಖ್ಯಮಂತ್ರಿಗಳಲ್ಲಿ ವಿನಂತಿಸಿದಾಗ ಮುಖ್ಯಮಂತ್ರಿಗಳು ಉತ್ಸವ ಆಚರಣೆಗೆ 1 ಕೋಟಿ ರೂ ಹಣವನ್ನು ಮತ್ತು ಹಿಂದಿನ ವರ್ಷದ ಉತ್ಸವದ ಬಾಕಿ ಹಣ ₹ 50 ಲಕ್ಷ ಬಿಡುಗಡೆ ಮಾಡಿ, ಉತ್ಸವ ಉದ್ಘಾಟನೆಗೆ ಆಗಮಿಸುವುದಾಗಿ ತಿಳಿಸಿದ್ದಾರೆ' ಎಂದರು.

'ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಹಿಂದಿನ ಅಧಿಕಾರಾವಧಿಯಲ್ಲಿ ಸಂಗೊಳ್ಳಿ ರಾಯಣ್ಣನ ಶೌರ್ಯ, ಸಾಹಸ, ದೇಶಪ್ರೇಮ ಅಜರಾಮರವಾಗಿರಲು ಹಾಗೂ ನಾಡಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ₹ 150 ಕೋಟಿ ವೆಚ್ಚದಲ್ಲಿ ಅಂತರರಾಷ್ಟ್ರೀಯ ಮಟ್ಟದ ಸೈನಿಕ ವಸತಿ ಶಾಲೆ, ಯೋಜನೆಗೆ ಹಾಗೂ ರಾಯಣ್ಣ ಜೀವನ ಚರಿತ್ರೆ ಮತ್ತು ಅವರ ಸ್ವಾತಂತ್ರ್ಯ ಸಂಗ್ರಾಮದ ಹೋರಾಟದ ರೂಪ-ರೇಷೆಗಳನ್ನು ಬಿಂಬಿಸುವ ರಾಕ್ ಗಾರ್ಡನ್ ₹ 12 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಅನುದಾನ ನೀಡಿದ್ದು ಇತಿಹಾಸವಾಗಿದೆ. ಸೈನಿಕ ವಸತಿ ಶಾಲೆಯಿಂದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲಿದೆ. ರಾಕ್ ಗಾರ್ಡನ್ ನಿರ್ಮಾಣದಿಂದ ರಾಯಣ್ಣನ ಜನ್ಮ ಸ್ಥಳ ಸಂಗೊಳ್ಳಿ ಗ್ರಾಮ ಪ್ರವಾಸಿ ತಾಣವಾಗಿ ಪ್ರವಾಸಿಗರನ್ನು ಆಕರ್ಷಿಸಲಿದೆ' ಎಂದರು.

ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಸಂಗೊಳ್ಳಿ ಹಿರೇಮಠದ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ, ಕಿತ್ತೂರು ಕಲ್ಮಠದ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ನಗರಾಭಿವೃದ್ದಿ ಸಚಿವ ಬೈರತಿ ಸುರೇಶ, ಮುಖ್ಯ ಸಚೇತಕ ಅಶೋಕ ಪಟ್ಟಣ, ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಆಗಮಿಸುವರು ಎಂದರು.

ಈ ಉತ್ಸವದಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನೀರಿಕ್ಷೆ ಇದ್ದು, ಜಾನಪದ, ಕುಸ್ತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಉತ್ಸವಕ್ಕೆ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು, ನಾಡಿನ ಜನತೆ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT